Ad

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ ಮೋದಿ

ಭಾರತಕ್ಕೆ ಟಿ20 ವಿಶ್ವಕಪ್‌ ತಂದುಕೊಟ್ಟ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಭಾರತಕ್ಕೆ ಟಿ20 ವಿಶ್ವಕಪ್‌ ತಂದುಕೊಟ್ಟ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Ad
300x250 2

ಭಾರತ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ವಿಶ್‌ ಮಾಡಿದ್ದಾರೆ. ಜೊತೆಗೆ ವಿಡಿಯೋ ಸಂದೇಶ ಕೂಡ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ವಿಶ್ವಕಪ್‌ ಅಷ್ಟೇ ಅಲ್ಲ, ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದೆ. ಒಂದೇ ಒಂದು ಪಂದ್ಯವನ್ನು ಸೋಲದಿರುವುದು ಸಣ್ಣ ಸಾಧನೆಯಲ್ಲ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಈ ಅದ್ಭುತ ಗೆಲುವಿಗಾಗಿ ಭಾರತಕ್ಕೆ ಅಭಿನಂದನೆಗಳು. ಇಂದು, 140 ಕೋಟಿ ದೇಶವಾಸಿಗಳು ನಿಮ್ಮ ಅದ್ಭುತ ಪ್ರದರ್ಶನದ ಬಗ್ಗೆ ಹೆಮ್ಮೆಪಡುತ್ತಾರೆ. ನೀವು ವಿಶ್ವಕಪ್ ಗೆದ್ದಿದ್ದೀರಿ ಮತ್ತು ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದ್ದೀರಿ. ನೀವು ಒಂದು ಪಂದ್ಯವನ್ನೂ ಸೋತಿಲ್ಲ. ಅದು ಸಣ್ಣ ಸಾಧನೆಯಲ್ಲ. ನೀವು ಅದ್ಭುತ ವಿಜಯವನ್ನು ಸಾಧಿಸಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಪೋಸ್ಟ್‌ ಹಾಕಿದ್ದು, ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಎಂದಿಗೂ ಬತ್ತದ ಉತ್ಸಾಹದಿಂದ, ತಂಡವು ಕಠಿಣ ಪರಿಸ್ಥಿತಿಗಳಲ್ಲಿ ಸಾಗಿತು. ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮ ಕೌಶಲ್ಯವನ್ನು ಪ್ರದರ್ಶಿಸಿತು. ಟೀಮ್ ಇಂಡಿಯಾ ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಶ್ಲಾಘಿಸಿದ್ದಾರೆ.

 

 

 

Ad
Ad
Nk Channel Final 21 09 2023
Ad