ದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕೊನೆಯ ಚಿನ್ನದ ಪದಕದ ಭರವಸೆಯಾಗಿದ್ದ ನೀರಜ್ ಚೋಪ್ರಾ ಕೂಡ ಚಿನ್ನದ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದರು.
ಸಾಕಷ್ಟು ಪೈಪೋಟಿಯಿಂದ ಕೂಡಿದ್ದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 89.45 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆಲ್ಲುವಲ್ಲಿ ನೀರಜ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ಗಳಲ್ಲಿ ಪದಕ ಭೇಟೆಯಾಡಿದ ಭಾರತದ ನಾಲ್ಕನೇ ಅಥ್ಲೀಟ್ ಎನಿಸಿಕೊಂಡರು. ಹೀಗಾಗಿ ನೀರಜ್ ಅವರ ಸಾಧನೆಗೆ ಭಾರತದಾದ್ಯಂತೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಕೂಡ ನೀರಜ್ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.
ಬೆಳ್ಳಿ ಪದಕ ಗೆದ್ದ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ, ನೀರಜ್ ಅವರ ಅದ್ಭುತ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ, ಅವರ ಗಾಯದ ಬಗ್ಗೆಯೂ ವಿಚಾರಿಸಿದರು. ಇದಲ್ಲದೆ ನೀರಜ್ ತಾಯಿಯ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ನೀರಜ್ ಚೋಪ್ರಾ ಅವರ ಈ ಸಾಧನೆಗಾಗಿ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಲಾಗುತ್ತಿದೆ.
#WATCH | PM Narendra Modi spoke to Javelin thrower Neeraj Chopra and congratulated him on the Silver medal. He also enquired about his injury and lauded the sportsman spirit shown by his mother.#Paris2024 #Paris2024Olympic pic.twitter.com/DvVEMcNbPQ
— ANI (@ANI) August 9, 2024

