News Karnataka Kannada
Sunday, May 05 2024
ಕ್ರೀಡೆ

ವಿರಾಟ್ ಕೊಹ್ಲಿ ಸಾಧನೆಗೆ ಮೋದಿ ಅಭಿನಂದನೆ

Modi congratulates Virat Kohli for his achievement
Photo Credit :

ನವದೆಹಲಿ: ವಿರಾಟ್ ಕೊಹ್ಲಿ ತಮ್ಮ 50 ನೇ ಏಕದಿನ ಪಂದ್ಯ ಶತಕವನ್ನು ಗಳಿಸಿದ್ದು ಮಾತ್ರವಲ್ಲ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ. ಈ ಗಮನಾರ್ಹ ಮೈಲುಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ. ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೆ ಬೆಂಚ್​​​ಮಾರ್ಕ್ ಸ್ಥಾಪಿಸುವುದನ್ನು ಮುಂದುವರಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕಗಳ ನೆರವಿನಿಂದ ಭಾರತ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 398 ರನ್ ಗಳ ಬೃಹತ್ ಗುರಿ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತು. ವಿರಾಟ್ ಕೊಹ್ಲಿ ಏಕದಿನ ವೃತ್ತಿಜೀವನದಲ್ಲಿ ನಲ್ಲಿ 50ನೇ ಶತಕ ಸಿಡಿಸಿದ್ದು ಹಲವು ಬ್ಯಾಟಿಂಗ್ ದಾಖಲೆಗಳನ್ನು ಮುರಿದಿದ್ದಾರೆ. ಇಂದಿನ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮುಂದೆ ಕಿವೀಸ್ ಬೌಲಿಂಗ್ ಮುಗ್ಗರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು