News Karnataka Kannada
Sunday, April 28 2024
ದೇಶ

ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾಗೆ ಪ್ರಧಾನಿ ಮೋದಿ ಶ್ಲಾಘನೆ

pm modi
Photo Credit : News Kannada

ನವದೆಹಲಿ: ಜಾವೆಲಿನ್ ನಲ್ಲಿ ಹೊಸ ದಾಖಲೆ ಬರೆದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಇತಿಹಾಸ ಸೃಷ್ಟಿಸಿದ್ದಾರೆ . ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರಾ ಅವರು ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಬುಡಾಪೆಸ್ಟ್‌ನಲ್ಲಿ ನಡೆದ ಫೈನಲ್‌ನಲ್ಲಿ ನೀರಜ್ 88.17 ಮೀಟರ್ ದೂರ ಎಸೆದು ಪಾಕಿಸ್ತಾನದ ಅರ್ಷದ್ ನದೀಮ್ ಸೇರಿದಂತೆ 11 ಅಥ್ಲೀಟ್‌ಗಳನ್ನು ಹಿಂದಿಕ್ಕಿ ಚಿನ್ನ ಗೆದ್ದರು. ಇದರೊಂದಿಗೆ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಸೇನೆ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ‘ಪ್ರತಿಭಾವಂತ ನೀರಜ್ ಚೋಪ್ರಾ ಅವರು ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿರಿಸಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು’ ಎಂದು ಮೋದಿ ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು