ಐಪಿಎಲ್ 2026ರ ಕಹಳೆ ಮೊಳಗುವ ಹೊತ್ತಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಕನಿಷ್ಠ ಎರಡು ವಾರಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಸಿಎಸ್‌ಕೆ ಅಧಿಕೃತವಾಗಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಧೋನಿ ಸದ್ಯ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯಗಳಲ್ಲಿ ಧೋನಿ ಅನುಪಸ್ಥಿತಿ ತಂಡಕ್ಕೆ ಹೇಗೆ ಬಿಸಿತುಪ್ಪವಾಗಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

View this post on Instagram

A post shared by News Karnataka (@newskarnataka)