Bengaluru 24°C
Ad

ಒಲಿಂಪಿಕ್ಸ್‌ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ಯಾರಿಸ್​ ಒಲಿಂಪಿಕ್ಸ್ ಜುಲೈ 26ರಿಂದ ಆರಂಭಗೊಳ್ಳಲಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯ ಕೋರಿದ್ದಾರೆ.

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್ ಜುಲೈ 26ರಿಂದ ಆರಂಭಗೊಳ್ಳಲಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯ ಕೋರಿದ್ದಾರೆ.

21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ಗುರುವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಜತೆಗೆ 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸುವ ದೇಶದ ಧೈರ್ಯಶಾಲಿ ಪ್ರಯತ್ನವನ್ನು ಬೆಂಬಲಿಸಿದರು.

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದರು.

 

Ad
Ad
Nk Channel Final 21 09 2023
Ad