ಮೈಸೂರು: ಕ್ರೀಡಾಕೂಟ ಯಶಸ್ವಿಗೊಳಿಸಲು ಡಿಸಿ ಡಾ. ಕೆ.ವಿ.ರಾಜೇಂದ್ರ ಸೂಚನೆ

ಮೈಸೂರು: ರಾಜ್ಯ ಮಟ್ಟದ 2022-23 ನೇ ಸಾಲಿನ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದ್ದು, ತಮಗೆ ಸಿಕ್ಕಿರುವ ಜವಬ್ದಾರಿಯನ್ನು ಬದ್ದತೆಯಿಂದ ನಿರ್ವಹಿಸಿ ಕ್ರೀಡಾಕೂಟವನ್ನು ಯಶಶ್ವಿಯಾಗಿ ನಡೆಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2022-23 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2 ವರ್ಷದ ಕೊರೋನಾ ನಂತರದಲ್ಲಿ ಮೊದಲ ಬಾರಿಗೆ ಮೈಸೂರಿನಲ್ಲಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಸುತ್ತಿದ್ದು, ಎಲ್ಲಾ ಕ್ರೀಡಾಪಟುಗಳ, ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ವ್ಯವಸ್ಥೆಗಳನ್ನು ರೂಪಿಸಿ ಎಂದು ತಿಳಿಸಿದರು.

ಪ್ರತಿಯೊಬ್ಬ ಕ್ರೀಡಾಪಟುವಿಗೂ ಉತ್ತಮ ವಸತಿ ಸೌಲಭ್ಯ ಕಲ್ಪಿಸಿ. ಅವರಿಗೆ ನೀಡಿರುವ ವಸತಿ ಸ್ಥಳದಿಂದ ಕ್ರೀಡಾಂಗಣಕ್ಕೆ ಶಾಲಾ ಬಸ್ ವ್ಯವಸ್ಥೆ ಮಾಡಬೇಕು. ಒಂದು ಜಿಲ್ಲೆಯ ಮಕ್ಕಳಿಗೆ ಮೂರು ಜನ ಅಧಿಕಾರಿಗಳನ್ನು ನೇಮಿಸಿ ಕ್ರೀಡಾಕೂಟ ಮುಗಿಯುವವರೆಗೆ ಅವರ ಸಂಪೂರ್ಣ ಜವಾಬ್ದಾರಿಯನ್ನು ನೋಡಿಕೊಳ್ಳಬೇಕು. ಹೊರಗಿನಿಂದ ಬರುವ ಕ್ರೀಡಾಪಟುಗಳು ಮೈಸೂರಿನ ಕೆಲವು ಸ್ಥಳಗಳನ್ನು ವೀಕ್ಷಿಸಲು ವ್ಯವಸ್ಥೆ ಮಾಡಿ ಎಂದರು.

ಕ್ರೀಡಾಂಗಣದಲ್ಲಿ ಮೊಬೈಲ್ ಟಾಯ್ಲೆಟ್ಸ್ ವ್ಯವಸ್ಥೆ ಮಾಡಬೇಕು. ಪೊಲೀಸ್ ಸಿಬ್ಬಂದಿಗಳು ಸಂಪೂರ್ಣ ಕ್ರೀಡಾಕೂಟದ ಭದ್ರತೆಯನ್ನು ವಹಿಸಬೇಕು. ವೈದ್ಯಕೀಯ ವ್ಯವಸ್ಥೆ ಬಹಳ ಮುಖ್ಯವಾಗಿದ್ದು ಅದಕ್ಕಾಗಿ ಕ್ರೀಡಾಂಗಣದಲ್ಲಿ ಸದಾ ಸಿದ್ಧವಿರುವಂತೆ ಒಂದು ವೈದ್ಯರ ತಂಡವನ್ನು ನೇಮಿಸಿ ಮತ್ತು ಆಂಬುಲೆನ್ಸ್ ಸೌಲಭ್ಯ ಒದಗಿಸಿ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಾಜೇಂದ್ರ ಅರಸ್ ಅವರು ಮಾತನಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಟ್ಟದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 4608 ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಾಥಮಿಕ ಶಾಲಾ ಮಕ್ಕಳಿಗೆ 10 ಸ್ಪರ್ಧೆಗಳು ಮತ್ತು ಪ್ರೌಢಶಾಲಾ ಮಕ್ಕಳಿಗೆ 19 ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪ್ರಸಾದ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

6 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

15 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

18 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

29 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

32 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

33 mins ago