ಮೈಸೂರು: ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಸಹಕಾರಿ- ಬಿ. ಮಾಲತಿ

ಮೈಸೂರು: ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕಿ ಬಿ. ಮಾಲತಿ ಕರೆ ನೀಡಿದರು.

ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ವತಿಯಿಂದ ಮೈಸೂರು ಜಿಲ್ಲಾ ವಸತಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಹಾಗೂ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರಥಮ ಬಾರಿಗೆ ಕ್ರೀಡಾಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು, ಇದರಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕ್ರಿಯಾಶೀಲರಾಗಿರಲು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಭಾವನೆ ಉಂಟಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಭಾವನೆಯಿಂದ ಸೋಲು ಗೆಲುವುಗಳನ್ನು ಸಮನಾಂತರವಾಗಿ ಸ್ವೀಕರಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.

ಸಮಾರಂಭದಲ್ಲಿ ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಅಂತರರಾಷ್ಟ್ರೀಯ ಕ್ರೀಡಾಪಟು ಧನುಷಾ, ಜಿಲ್ಲಾ ಸಮನ್ವಯಾಧಿಕಾರಿ ಹೇಮ್‌ಕುಮಾರ್, ಆನಂದ್, ಗಣೇಶ್, ಗಣಪತಿ ಜಕಾತಿ, ಆಶಾ ಮಹಾಂತೇಶ್ ಮಾಟೋಳಿ, ಪ್ರಾಂಶುಪಾಲರಾದ ರಂಗನಾಥ್, ವಸಂತ ಹಾಜರಿದ್ದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago