ಮೈಸೂರು: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಮೈಸೂರು: ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು 2022ರ ಡಿಸೆಂಬರ್ 20 ಮತ್ತು 21 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ಸ್ಪೋರ್ಟ್ಸ್ ಪೆವಿಲಿಯನ್, ಮೈಸೂರು ವಿಶ್ವವಿದ್ಯಾನಿಲಯ, ಮಹರ್ಷಿಶಾಲೆ, ಜೆ.ಪಿ ನಗರ, ಕನ್ನೆಗೌಡ ಕ್ರೀಡಾಂಗಣ ಕುವೆಂಪುನಗರ ಮೈಸೂರು ಈ ಸ್ಥಳಗಳಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿರುತ್ತದೆ.

ಕ್ರೀಡೆಗಳು ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಟೆನಿಕಾಯ್ಟ್, ವೇಯ್ಟ್ಲಿಫ್ಟಿಂಗ್, ಪವರ್‌ಲಿಫ್ಟಿಂಗ್, ಬೆಸ್ಟ್ಫಿಸಿಕ್, ಚೆಸ್, ಥ್ರೋಬಾಲ್, ಈಜು, ಕೇರಂ, ಬಾಲ್ ಬ್ಯಾಡ್ಮಿಂಟನ್, ಟೆನಿಸ್ ಫುಟ್ಬಾಲ್, ಮತ್ತು ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಕ್ರಿಕೆಟ್ ಈ ಕ್ರೀಡೆಗಳಲ್ಲಿ ಭಾಗವಹಿಸಬಹುದು.

(ಮೌಖಿಕ ಕ್ಲಾಸಿಕಲ್), ಲಘು ಶಾಸ್ತ್ರೀಯ ಸಂಗೀತ (ಮೌಖಿಕ ಕ್ಲಾಸಿಕಲ್), ಕರ್ನಾಟಕ ಶಾಸ್ತ್ರೀಯ ಸಂಗೀತ:-ಕರ್ನಾಟಕ ಲಘು ಶಾಸ್ತ್ರೀಯ ಸಂಗೀತ, ಜಾನಪದ ಗೀತೆ (ವೈಯಕ್ತಿಕ), ಜಾನಪದ ಗೀತೆ (ತಂಡ), ನೃತ್ಯ:-ಕಥಕ್, ಮಣಿಪುರಿ, ಕುಚಿಪುಡಿ, ಕಥಕಳ್ಳಿ, ಒಡಿಸ್ಸಿ, ಭರತನಾಟ್ಯ, ಜಾನಪದ ನೃತ್ಯ, ವಾದ್ಯ ಸಂಗೀತ: ವಾದ್ಯಗಳು, ಹಿಂದೂಸ್ಥಾನಿ (ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ), ಎಂಡ್ ವಾದ್ಯಗಳು (ಕರ್ನಾಟಕ-ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ), ಪರಿಕೇಷನ್ ವಾದ್ಯಗಳು (ಜನರಲ್), ಕರಕುಶಲ ವಸ್ತುಗಳ ಪ್ರದರ್ಶನ, ಕಿರುನಾಟಕ) ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದು.

ಡಿಸೆಂಬರ್ 20 ರ ಬೆಳಗ್ಗೆ 8.30 ಗಂಟೆ ಒಳಗಾಗಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೈಸೂರು ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ ನೌಕರರುಗಳು ತಮ್ಮ ಹೆಸರು ಮತ್ತು ಸ್ಪರ್ಧಿಸುವ ಕ್ರೀಡೆಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿವಿಹಾರ ಕ್ರೀಡಾಂಗಣ, ನಜರ್‌ಬಾದ್, ಮೈಸೂರು ಇಲ್ಲಿನ ದೂರವಾಣಿ ಸಂಖ್ಯೆ:0821-2564179 ರ ಮೂಲಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ), ಮೈಸೂರು ಇಲ್ಲಿನ ಗಿರೀಶ್ ಕ್ರೀಡಾ ಕಾರ್ಯದರ್ಶಿ ಮೊ.ಸಂಖ್ಯೆ:9738679150 ಹಾಗೂ ಗಣೇಶ್, ಕ್ರೀಡಾ ಕಾರ್ಯದರ್ಶಿ ಮೊ.ಸಂಖ್ಯೆ:9945383495 ಮತ್ತು ಆಯಾ ತಾಲ್ಲೂಕಿನ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ), ಇವರುಗಳನ್ನು ಸಂಪರ್ಕಿಸಬಹುದಾಗಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago