News Karnataka Kannada
Sunday, May 05 2024
ಮೈಸೂರು

ಮೈಸೂರು: ಜಿಲ್ಲಾ ಮಟ್ಟದ ಮೈಸೂರು ದಸರಾ ಸಿಎಂ ಕಪ್

Mys
Photo Credit : By Author

ಮೈಸೂರು: ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2022-23ನೇ ಸಾಲಿನ ಮೈಸೂರು ಜಿಲ್ಲಾ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಡವನ್ನು ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 15 ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ.

ಮೈಸೂರು ಜಿಲ್ಲೆಯ 8 ತಾಲ್ಲೂಕುಗಳಲ್ಲಿ ನಡೆದ ತಾಲ್ಲೂಕು ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಪುರುಷ ಹಾಗೂ ಮಹಿಳಾ ಅಥ್ಲೆಟಿಕ್ಸ್ಗಳಿಗೆ 100ಮೀ, 200ಮೀ, 400ಮೀ, 800 ಮೀ, 1500ಮೀ, 3003ಮೀ ಹಾಗೂ 5000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲೀನ್ ಥ್ರೋ, ಡಿಸ್ಕಸ್ ಥ್ರೋ, ವಾಲಿಬಾಲ್ ಫುಟ್‌ಬಾಲ್ ಖೋ-ಖೋ, ಕಬ್ಬಡಿ, ಬ್ಯಾಸ್ಕಟ್ ಬಾಲ್, ಕುಸ್ತಿ, ಬ್ಯಾಸ್ಕಟ್ ಬಾಲ್ ಈಜು ಸೇರಿದಂತೆ ಅನೇಕ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ.

ದಸರಾ ಸಿ.ಎಂ. ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಿಲು ಅರ್ಹರಿರುವ ಕ್ರೀಡಾಪಟುಗಳು ಸೆ.14ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಾಮುಂಡಿ ವಿಹಾರ ಕ್ರೀಡಾಂಗಣದ ಆವರಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ 0821-2564179 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು