ನಾರಾವಿ: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

ನಾರಾವಿ, ಸೆ.7: ದ. ಕನ್ನಡಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ/ಬಾಲಕಿಯರ ತ್ರೋಬಾಲ್ ಪಂದ್ಯಾಟವು ದಕ್ಷಿಣಕನ್ನಡ ಸಾಕ್ಷರತಾ ಇಲಾಖೆ, ಮತ್ತು ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆ ಇವರ ಜಂಟಿ ಆಶ್ರಯದಲ್ಲಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಕೇಂದ್ರ ಮೈದಾನದಲ್ಲಿಆಯೋಜಿಸಲಾಗಿತ್ತು.

ಸಮಾರಂಭವನ್ನು ರಾಷ್ಟ್ರೀಯ ತ್ರೋಬಾಲ್‌ ಆಟಗಾರರಾದ ಸುಜಿತ್ ಕೆ. ಬಂದಾರು ಅವರು ವಿನೂತನ ರೀತಿಯಲ್ಲಿ ಚೆಂಡನ್ನು ಅಂಗಳದಲ್ಲಿ ಚಲಾಯಿಸುವ ಮುಖಾಂತರ ಉದ್ಘಾಟಿಸಿದರು.

ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರವೀಂದ್ರ ಪೂಜಾರಿ, ಮುಖ್ಯ ಅತಿಥಿಗಳ ನೆಲೆಯಲ್ಲಿ ನೆರೆದ ಜಿಲ್ಲೆಯ ಎಲ್ಲಾ ತಂಡಗಳಿಗೆ ಶುಭ ಹಾರೈಸಿ, ಸಂತ ಪಾವ್ಲ ಶಾಲೆಯ ಹಳೆ ವಿದ್ಯಾರ್ಥಿಯಾಗಿ ಕಳೆದ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಂಡರು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಸೈಮನ್ ಡಿ’ಸೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿಗ್ರಾಮ ಪಂಚಾಯತ್ ಸದಸ್ಯರಾದ ಡಾಯ್ನಾರೊಡ್ರಿಗಸ್, ಮಲ್ಲಿಕಾ, ಜಿಲ್ಲಾದೈಹಿಕ ಶಿಕ್ಷಣಾಧಿಕಾರಿಗಳಾದ  ಭುವನೇಶ್‌ಜೆ., ನಿತ್ಯಾನಂದ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಾಣಾಧಿಕಾರಿಗಳು, ಮೂಡಬಿದ್ರೆ,  ಸಂತೋಷ್‌ ಕುಮಾರ್ ನಾರಾವಿ ಮತ್ತು ಅಂಡಿಂಜೆ ಕ್ಲಸ್ಟರ್‌ ಅಧಿಕಾರಿ, ಪ್ರಾಂಶುಪಾಲರಾದ ವಂದನೀಯ ಫಾದರ್‌ ಆಲ್ವಿನ್ ಸೆರಾವೊ, ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ರೀಟಾ ಪಿಂಟೊ, ಶಿಕ್ಷಣ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರು ಉಪಸ್ಥಿತರಿದ್ದರು.

ಶಿಕ್ಷಣ ಸಂಸ್ಥೆಗಳ ವತಿಯಿಂದ ರಾಷ್ಟ್ರೀಯ ತ್ರೋಬಾಲ್‌ ಆಟಗಾರರಾದ ಸುಜಿತ್‌ಕೆ, ಬಂದಾರು ಅವರನ್ನು ಸನ್ಮಾನಿಸಲಾಯಿತು. ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸೋಫಿಯಾ ಫೆರ್ನಾಂಡಿಸ್‌ರವರು ಆಗಮಿಸಿದ ಎಲ್ಲಾ ಗಣ್ಯರನ್ನು ಹಾಗೂ ಕ್ರೀಡಾಪಟುಗಳನ್ನು ಸ್ವಾಗತಿಸಿದರು.

ಪಂದ್ಯಾಟದಲ್ಲಿದಕ್ಷಿಣಕನ್ನಡಜಿಲ್ಲೆಯ 28 ತಂಡಗಳು ಭಾಗವಹಿಸಿದ್ದವು. ಉಪನ್ಯಾಸಕರಾದ ಅವಿಲ್ ಮೋರಾಸ್‌ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ  ಮಹೇಶ್‌ ಧನ್ಯವಾದ ಸಮರ್ಪಿಸಿದರು. ಭಾಗವಹಿಸಿದ ಎಲ್ಲಾ ತಂಡಗಳು ಕ್ರೀಡಾ ಮನೋಭಾವದಿಂದ ಉತ್ತಮ ರೀತಿಯ ಪ್ರದರ್ಶನ ನೀಡಿದರು. ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆ ನೂರು ವರುಷಗಳನ್ನು ಪೂರೈಸುವ ಶತಮಾನೋತ್ಸವದ ಪಂದ್ಯಾಟದಲ್ಲಿಅತಿಥೇಯ ಶಾಲೆ ಪಂದ್ಯಾಟವನ್ನು ಏರ್ಪಡಿಸುವಲ್ಲಿ ದಕ್ಷಿಣಕನ್ನಡ ಸಾಕ್ಷರತಾ ಇಲಾಖೆಯೊಂದಿಗೆ ಕೈ ಜೋಡಿಸಿತ್ತು.

ಪಂದ್ಯಾಟದಲ್ಲಿ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಬೆಥನಿ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ತಾಲೂಕು, ದ್ವಿತೀಯ ಮಹಾಲಿಂಗೇಶ್ವರ ಪ್ರಾಥಮಿಕ ಶಾಲೆ, ಸುರತ್ಕಲ್, ಮಂಗಳೂರು ಉತ್ತರ, ಬಾಲಕರ ವಿಭಾಗದಲ್ಲಿ ಪ್ರಥಮ ಇಂದ್ರಪ್ರಸ್ಥ ವಿದ್ಯಾಲಯ, ಉಪ್ಪಿನಂಗಡಿ, ಪುತ್ತೂರುತಾಲೂಕು ಹಾಗೂ ದ್ವಿತೀಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ, ಬೆಳ್ತಂಗಡಿ ತಾಲೂಕು, ಪ್ರೌಢಶಾಲಾ ವಿಭಾಗದ ಬಾಲಕರಲ್ಲಿ ಪ್ರಥಮ ಇಂದ್ರಪ್ರಸ್ಥ ವಿದ್ಯಾಲಯ, ಪುತ್ತೂರು, ಪುತ್ತೂರು ತಾಲೂಕು, ದ್ವಿತೀಯ ಅಲ್ ಬದ್ರಿಯಾ ಆಂಗ್ಲಮಾಧ್ಯಮ ಪ್ರೌಢಶಾಲೆ, ಕೃಷ್ಣಾಪುರ, ಸುರತ್ಕಲ್ ಮಂಗಳೂರು ಉತ್ತರ. ಬಾಲಕಿಯರ ವಿಭಾಗದಲ್ಲಿ ಪ್ರಥಮ ಬೆಥನಿ ಆಂಗ್ಲಮಾಧ್ಯಮ ಶಾಲೆ, ಪುತ್ತೂರು, ಪುತ್ತೂರುತಾಲೂಕು, ದ್ವಿತೀಯ ಸೈಂಟ್ ಮೇರೀಸ್‌ಆಂಗ್ಲ ಮಾಧ್ಯಮ ಶಾಲೆ, ಲಾಯಿಲ, ಬೆಳ್ತಂಗಡಿ ತಾಲೂಕು.

Gayathri SG

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

12 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

20 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

24 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

35 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

38 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

39 mins ago