ಮಹಾನಗರ: ಮಧ್ಯಪ್ರದೇಶದ ಸತ್ತಾ ಜಿಲ್ಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಅತ್ತಾವರದ ದಿಯಾ ದಿನೇಶ್ ಅವರು ಪ್ರಥಮ ಸ್ಥಾನದೊಂದಿಗೆ 2 ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಮುಂದಿನ ತಿಂಗಳು ಉತ್ತರ ಪ್ರದೇಶದ ಲಕ್ಕೋದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಳೆದ ತಿಂಗಳು ಅಧ್ರಪ್ರದೇಶದಲ್ಲಿ ನಡೆದ ರಾಷ್ಟ್ರೀಯ ವಲಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಇರು ಪ್ರಥಮ ಸ್ಥಾನ ಪಡೆದು ಬಂಗಾರದ ಪದಕ ಪಡೆದುಕೊಂಡಿದ್ದರು. ಕೊಡಿಯಾ ಲು ಶಾರದಾ ವಿದ್ಯಾಲಯದಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 3 ದಿನೇಶ್ ಭಂಡಾರಿ ಹಾಗೂ ಪ್ರಿಯಾ ದಂಪತಿಯ ಪುತ್ರಿ.

