Categories: ಕ್ರೀಡೆ

ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ಆರ್ನಾ ರಾಜೇಶ್

ಮಂಗಳೂರು: ʼಇಂಡಿಯಾ ಸ್ಕೇಟ್ʼ ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಸದಸ್ಯೆ ಆರ್ನಾ ರಾಜೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಝಾರ್ಖಂಡ್ ನ ರಾಂಚಿಯಲ್ಲಿ ಜೂನ್ 1 ರಿಂದ 5ರ ವರೆಗೆ ನಡೆದ 7 ರಿಂದ 9ರ ವಯೋಮಾನದ ʼಟು ಲ್ಯಾಪ್ಸ್ ರೋಡ್ ರೇಸ್ʼ ಬಾಲಕಿಯರ ಸ್ಕೇಟಿಂಗ್ ನಲ್ಲಿ ಆರ್ನಾ ರಾಜೇಶ್ ಪ್ರಬಲ ಸ್ಪರ್ಧೆಯೊಡ್ಡಿ ಅಂತಿಮವಾಗಿ ದ್ವಿತೀಯ ಸ್ಥಾನಿಯಾಗಿ ಬೆಳ್ಳಿ ಪದಕ ಪಡೆದರು.

ಆರ್ನಾ ರಾಜೇಶ್ ಮಂಗಳೂರಿನ ಕದ್ರಿ ಹಿಲ್ಸ್ ನ ವೈದ್ಯ ದಂಪತಿಯಾದ ಡಾ. ರಾಜೇಶ್ ಹುಕ್ಕೇರಿ ಹಾಗೂ ಡಾ. ಅನಿತಾ ರಾಜೇಶ್ ದಂಪತಿಯ ಪುತ್ರಿಯಾಗಿದ್ದಾರೆ. ಪ್ರಸ್ತುತ ಆರ್ನಾ ಬಿಜೈಯ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.

ಇವರು ಬೆಂಗಳೂರಿನ ಸ್ಕೇಟಿಂಗ್ ತರಬೇತಿಯ ಮುಖ್ಯ ಕೋಚ್ ಪ್ರತೀಕ್ ರಾಜಾ ಹಾಗೂ ಸಹ ಕೋಚ್ ತೇಜಸ್ವಿನಿ ಕನ್ಬಿಲ್ ಇವರ ಅಡಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಆರ್ನಾ ರಾಜೇಶ್ 2023ನೇ ಸಾಲಿನ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾಗಿದ್ದರು.

Sneha Gowda

Recent Posts

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

18 mins ago

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

44 mins ago

ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ: ಹಲವರು ಸೇನೆಯ ವಶಕ್ಕೆ

ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…

1 hour ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

2 hours ago

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

2 hours ago

ಮೇ 13 ರಿಂದ 17ರ ವರೆಗೆ  ಚಿಣ್ಣರ ಕಲರವ – 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ…

2 hours ago