ಹಂಗೇರಿ: ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಜಾವೆಲಿನ್ ಥ್ರೋ ಫೈನಲ್ನಲ್ಲಿ ಗೆದ್ದು ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. 12 ಆಟಗಾರರನ್ನು ಒಳಗೊಂಡ ಅಂತಿಮ ಹಣಾಹಣಿಯಲ್ಲಿ 88.17 ಮೀಟರ್ ದೂರಕ್ಕೆ ಭರ್ಜಿ ಎಸೆದು ಚೋಪ್ರಾ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟು ಹೊಸ ಇತಿಹಾಸ ನಿರ್ಮಿಸಿದರು.
6 ಸುತ್ತಿನ ಈ ಸ್ಪರ್ಧೆಯ ಮೊದಲ ರೌಂಡ್ನಲ್ಲೇ ನೀರಜ್ ಚೋಪ್ರಾ ಫೌಲ್ ಮಾಡಿದ್ದರು. ಆದರೆ ಅತ್ತ ಎಲ್ಲರೂ ಮೊದಲ ಎಸೆತದಲ್ಲೇ ಖಾತೆ ತೆರೆದಿದ್ದರು. ಇತ್ತ ನೀರಜ್ ಚೋಪ್ರಾ 12ನೇ ಸ್ಥಾನದಲ್ಲಿ ಕಾಣಿಸಿಕೊಂಡರು.
ಇನ್ನು ದ್ವಿತೀಯ ಸುತ್ತಿನಲ್ಲಿ ತಪ್ಪಾಗದಂತೆ ಎಚ್ಚರಿಕೆಯೊಂದಿಗೆ ಕಣಕ್ಕಿಳಿದ ನೀರಜ್ ಚೋಪ್ರಾ ಬರೋಬ್ಬರಿ 88.17 ಮೀಟರ್ ದೂರಕ್ಕೆ ಭರ್ಜಿ ಎಸೆದರು. ಇದಾದ ಬಳಿಕ 86.32 ಮೀ, 84.64 ಮೀ, 87.73 ಮೀ, 83.98 ಮೀಟರ್ವರೆಗೆ ಎಸೆದರೂ 2ನೇ ಸುತ್ತಿನ ದೂರವನ್ನು ಕ್ರಮಿಸಲು ಸಾಧ್ಯವಾಗಲಿಲ್ಲ.
ಮತ್ತೊಂದೆಡೆ ಉಳಿದ ಸ್ಪರ್ಧಿಗಳು ನೀರಜ್ ಚೋಪ್ರಾ ಅವರ 88.17 ಮೀಟರ್ ದೂರವನ್ನು ಹಿಂದಿಕ್ಕಲು ಸಫಲರಾಗಲಿಲ್ಲ. ಇದರೊಂದಿಗೆ ಭಾರತದ ಚಿನ್ನದ ಹುಡುಗನ ಪಾಲಿಗೆ ಮತ್ತೊಂದು ಚಿನ್ನದ ಪದಕ ಸೇರ್ಪಡೆಯಾಯಿತು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ