Categories: ಕ್ರೀಡೆ

ಹೊಸದಿಲ್ಲಿ: ಭಾರತೀಯ ಪುರುಷರ ಹಾಕಿ ತಂಡ ಮುಖ್ಯ ಕೋಚ್ ಆಗಿ ಕ್ರೇಗ್ ಫುಲ್ಟನ್ ನೇಮಕ

ಹೊಸದಿಲ್ಲಿ: ಮಾ.10ರಿಂದ ಆರಂಭವಾಗಲಿರುವ ಎಫ್ಐಎಚ್ ಹಾಕಿ ಪ್ರೊ ಲೀಗ್  ಮುಂಚಿತವಾಗಿ ಭಾರತೀಯ ಪುರುಷರ ಹಾಕಿ ತಂಡದ ನೂತನ ಮುಖ್ಯ ಕೋಚ್ ಆಗಿ ಕ್ರೇಗ್ ಫುಲ್ಟನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹಾಕಿ ಇಂಡಿಯಾ ಸಂಸ್ಥೆ ಶುಕ್ರವಾರ ಪ್ರಕಟಿಸಿದೆ.

ಸುಮಾರು 25 ವರ್ಷಗಳ ಕೋಚಿಂಗ್ ಅನುಭವ ಹೊಂದಿರುವ 48 ವರ್ಷದ ದಕ್ಷಿಣ ಆಫ್ರಿಕಾದ ಆಟಗಾರ ಕ್ರೇಗ್ ಫುಲ್ಟನ್ ಆದಷ್ಟು ಶೀಘ್ರ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಹಾಕಿ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

2014 ರಿಂದ 2018 ರವರೆಗೆ ಐರ್ಲೆಂಡ್ ಪುರುಷರ ತಂಡವು ರಿಯೋ ಒಲಿಂಪಿಕ್ ಕ್ರೀಡಾಕೂಟ 2016 ಕ್ಕೆ ಅರ್ಹತೆ ಪಡೆದಾಗ ಮುಖ್ಯ ತರಬೇತುದಾರರಾಗಿ ಕೆಲಸ ಮಾಡಿದ್ದರು.  ಈ ಐತಿಹಾಸಿಕ ಸಾಧನೆಯು ಅವರಿಗೆ ೨೦೧೫ ರಲ್ಲಿ ವರ್ಷದ ಎಫ್ಐಎಚ್ ತರಬೇತುದಾರ ಪ್ರಶಸ್ತಿಯನ್ನು ಗೆದ್ದುಕೊಟ್ಟಿತು.

ಅವರು ಹಾಲಿ ಒಲಿಂಪಿಕ್ ಚಾಂಪಿಯನ್ ಬೆಲ್ಜಿಯಂನೊಂದಿಗೆ ಸಹಾಯಕ ತರಬೇತುದಾರರಾಗಿ ಕೆಲಸ ಮಾಡಿದ್ದಾರೆ.  ಅಲ್ಲಿ ತಂಡವು ಟೋಕಿಯೊದಲ್ಲಿ ಚಿನ್ನದ ಪದಕವನ್ನು ಗೆದ್ದಿತ್ತು. ಭುವನೇಶ್ವರದಲ್ಲಿ 2018 ರಲ್ಲಿ ತಂಡವು ವಿಶ್ವಕಪ್ ಪಡೆದಾಗ ಅವರು ಬೆಲ್ಜಿಯಂ  ತಂಡದ ಕೋಚಿಂಗ್‌ ತಂಡದಲ್ಲಿದ್ದರು.

Ashika S

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

7 hours ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

7 hours ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

7 hours ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

8 hours ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

8 hours ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

9 hours ago