ನವದೆಹಲಿ: ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡವು ನೇಪಾಳ ತಂಡವನ್ನು ಎದುರಿಸಲಿದ್ದು, ಪಂದ್ಯಾಟ ಏಪ್ರಿಲ್ 25ರಿಂದ 30ರವರೆಗೆ ನೇಪಾಳದ ಪೋಖರಾ ಮತ್ತು ಕಠ್ಮಂಡುವಿನಲ್ಲಿ ನಡೆಯಲಿದೆ.
ತಂಡವು ಐದು ಟಿ20 ಪಂದ್ಯಗಳನ್ನು ಆಡಲಿದೆ ಎಂದು ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇನ್ ಇಂಡಿಯಾ (ಸಿಎಬಿಐ) ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
ಸಿಎಬಿಐ ಮತ್ತು ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ನ ಮಹಿಳಾ ಆಟಗಾರರನ್ನು ಮುನ್ನೆಲೆಗೆ ತರುವಲ್ಲಿ ವಿಶೇಷವಾಗಿ ಶ್ರಮಿಸಿದೆ. ವರ್ಷದ ಆರಂಭದಲ್ಲಿ ನಡೆದ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ತಂಡದ ಸಂಭಾವ್ಯರನ್ನು ಆಯ್ಕೆ ಮಾಡಲಾಗಿತ್ತು. ಭೋಪಾಲ್ನಲ್ಲಿ ನಡೆದ ರಾಷ್ಟ್ರೀಯ ಶಿಬಿರದ ನಂತರ ಅಂತಿಮ ತಂಡವನ್ನು ಆಯ್ಕೆ ಮಾಡಲಾಯಿತು. ಬಿ3 ವರ್ಗದ ಆಟಗಾರ್ತಿ ಸುಷ್ಮಾ ಪಟೇಲ್ ತಂಡದ ನಾಯಕತ್ವ ವಹಿಸಲಿದ್ದಾರೆ. ಭಾರತ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.