Categories: ಕ್ರೀಡೆ

ಈ ಬಾರಿ ಭಾರತ ವಿಶ್ವಕಪ್​ ಟ್ರೋಫಿ ಗೆಲ್ಲುವ ಬಗ್ಗೆ ನನಗೆ ಖಚಿತತೆ ಇಲ್ಲ ಎಂದ ಯುವಿ

ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಆದರೆ ತವರಿನಲ್ಲಿ ಪಂದ್ಯಾವಳಿ ನಡೆದರೂ ಭಾರತ ತಂಡ ಕಪ್ ಗೆಲ್ಲುವುದು ಅನುಮಾನ ಎಂದಿದ್ದಾರೆ ಯುವರಾಜ್ ಸಿಂಗ್. ಇದಕ್ಕೆ ಮುಖ್ಯ ಕಾರಣಗಳನ್ನೂ ಕೂಡ ಯುವಿ ಮುಂದಿಟ್ಟಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಯುವರಾಜ್ ಸಿಂಗ್, ಪ್ರಮಾಣಿಕವಾಗಿ ಹೇಳಬೇಕೆಂದರೆ, ಈ ಸಲ ಭಾರತ ಟ್ರೋಫಿ ಗೆಲ್ಲುವ ಬಗ್ಗೆ ನನಗೆ ಯಾವುದೇ ಖಚಿತತೆ ಇಲ್ಲ. ಇದಕ್ಕೆ ಮುಖ್ಯ ಕಾರಣ ತಂಡದ ಸಂಯೋಜನೆಯಲ್ಲಿ ಕಂಡು ಬರುತ್ತಿರುವ ಸಮಸ್ಯೆ ಎಂದು ತಿಳಿಸಿದ್ದಾರೆ.

ಒಬ್ಬ ದೇಶಪ್ರೇಮಿಯಾಗಿ ನನಗೂ ಭಾರತ ಗೆಲ್ಲಬೇಕೆಂಬ ಆಸೆಯಿದೆ. ಆದರೆ ಪ್ರಸ್ತುತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ನಲ್ಲಿ ಸಮಸ್ಯೆಗಳಿವೆ. ಟೀಮ್ ಇಂಡಿಯಾದ ಟಾಪ್ ಆರ್ಡರ್ ಉತ್ತಮವಾಗಿದೆ. ಆದರೆ 4ನೇ ಮತ್ತು 5ನೇ ಕ್ರಮಾಂಕದ ಬ್ಯಾಟರ್​ಗಳ ಪ್ರದರ್ಶನ ಬಹಳ ಮುಖ್ಯವಾಗುತ್ತದೆ.

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಬ್ಯಾಟರ್​ ಸ್ಕೋರ್​ಗಳಿಸಿದರಷ್ಟೇ ಸಾಲುವುದಿಲ್ಲ. ಇಲ್ಲಿ ಒತ್ತಡವನ್ನು ನಿಭಾಯಿಸುವ ಆಟಗಾರನ ಅಗತ್ಯವಿದೆ. ಹೀಗಾಗಿ ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕವನ್ನು ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ವಿಶ್ವಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂಬ ಅಭಿಪ್ರಾಯವನ್ನು  ಮುಂದಿಟ್ಟಿದ್ದಾರೆ.

Ashitha S

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

3 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

7 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

37 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

43 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

55 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago