ಸೂರತ್: ಮಾಜಿ ಆಟಗಾರ ಗೌತಮ್ ಗಂಭೀರ್ ಹಾಗೂ ವೇಗದ ಬೌಲರ್ ಶ್ರೀಶಾಂತ್ ನಡುವಿನ ಗಲಾಟೆ ವಿಚಾರವಾಗಿ ಶ್ರೀಶಾಂತ್ಗೆ ನೋಟಿಸ್ನ ಬಿಸಿ ತಟ್ಟಿದೆ.
ಇಂಡಿಯಾ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವೇಳೆ ಗೌತಮ್ ಗಂಭೀರ್ ಫಿಕ್ಸರ್ ಎಂದು ಕರೆದಿದ್ದಾರೆ ಎಂದು ಶ್ರೀಶಾಂತ್ ಆರೋಪಿಸಿದ್ದರು.
ಈಗ ಶ್ರೀಶಾಂತ್ ಅವರಿಗೆ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಕಮಿಷನರ್ ಲೀಗಲ್ ನೋಟಿಸ್ ನೀಡಿದ್ದಾರೆ. ಟಿ20 ಟೂರ್ನಿಯಲ್ಲಿ ಆಡುವ ವೇಳೆ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶ್ರೀಶಾಂತ್ ತಪ್ಪಿತಸ್ಥರು ಎಂದು ನೋಟಿಸ್ನಲ್ಲಿ ಹೇಳಲಾಗಿದೆ.
ಇಬ್ಬರ ಗಲಾಟೆ ವಿಚಾರವಾಗಿ ಅಂಪೈರ್ಗಳು ತಮ್ಮ ವರದಿಯನ್ನು ಕಳಿಸಿದ್ದು, ಶ್ರೀಶಾಂತ್ ಅವರನ್ನು ಫಿಕ್ಸರ್ ಎಂದು ಕರೆದ ಬಗ್ಗೆ ಅದರಲ್ಲಿ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ.
ಶ್ರೀಶಾಂತ್ ಅವರು ಒಂದೆರಡು ವೀಡಿಯೋಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಗಂಭೀರ್ ಅವರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.