ಲಂಡನ್: ಪ್ರತಿಷ್ಠಿತ ಟೆನಿಸ್ ಟೂರ್ನಿ ವಿಂಬಲ್ಡನ್ 2024ರ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಹಾಗೂ ಕಾರ್ಲೋಸ್ ಅಲ್ಕರಾಝ್ ಮುಖಾಮುಖಿಯಾಗಲಿದ್ದಾರೆ. ಲಂಡನ್ನ ಸೆಂಟರ್ ಕೋರ್ಟ್ ಮೈದಾನದಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಡೇನಿಯಲ್ ಮೆಡ್ವೆಡೆವ್ ಅವರನ್ನು ಸೋಲಿಸಿ ಅಲ್ಕರಾಝ್ ಫೈನಲ್ಗೆ ಪ್ರವೇಶಿಸಿದರು.
ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಇಬ್ಬರ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಪರಿಣಾಮ ಮ್ಯಾರಾಥಾನ್ ಆಟಕ್ಕೆ ಸಾಕ್ಷಿಯಾಗಿದ್ದ ಮೊದಲ ಸೆಟ್ ಅನ್ನು ಮೆಡ್ವೆಡೆವ್ 6-7 (1/7), ಅಂತರದಿಂದ ಗೆದ್ದರು. ಆದರೆ 2ನೇ ಸೆಟ್ನಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದ ಅಲ್ಕರಾಝ್ 6-3 ಅಂತರದಿಂದ ಗೆಲವು ದಾಖಲಿಸುವಲ್ಲಿ ಯಶಸ್ವಿಯಾದರು.

