ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ 2023ರ 11ನೇ ಪಂದ್ಯದಲ್ಲಿ ಇಂದು ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಝಿಲೆಂಡ್ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ನ್ಯೂಝಿಲೆಂಡ್ ನಾಯಕ ಕೇನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕಿವೀಸ್ ಪಡೆ ಭರ್ಜರಿ ಫಾರ್ಮ್ನಲ್ಲಿದ್ದು ಆಡಿದ ಎರಡೂ ಪಂದ್ಯಗಳಲ್ಲಿ ಗೆದ್ದು ಬೀಗಿ ಪಾಯಿಂಟ್ ಟೇಬಲ್ನಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇತ್ತ ಬಾಂಗ್ಲಾ ಆಡಿದ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಗೆಲುವು ಮತ್ತೊಂದರಲ್ಲಿ ಸೋಲು ಕಂಡು ಆರನೇ ಸ್ಥಾನದಲ್ಲಿದೆ. ಇನ್ನು ಕಿವೀಸ್ ಮಾರಕ ಬೌಲಿಂಗ್ 14 ಓವರ್ ಗಳ ಮುಕ್ತಾಯಕ್ಕೆ 69 ರನ್ ಗಳಿಸಿರುವ ಬಾಂಗ್ಲಾದ 4 ವಿಕೆಟ್ ಪತನಗೊಂಡಿದೆ.