News Karnataka Kannada
Monday, April 29 2024
ಕ್ರೀಡೆ

ಏಕದಿನ ವಿಶ್ವಕಪ್‌: ಇಂದು ನಡೆಯಲಿವೆ ಎರಡು ಪಂದ್ಯಗಳು

Odi World Cup 2019: Two matches today
Photo Credit : IANS

ಮುಂಬೈ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಹಬ್ಬದಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಲಖನೌದ ಭಾರತ್ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಂನಲ್ಲಿ ಬೆಳಗ್ಗೆ 10:30ಕ್ಕೆ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಸ್ಕಾಟ್ ಎಡ್ವರ್ಡ್ಸ್ ನಾಯಕತ್ವದ ನೆದರ್ಲೆಂಡ್ಸ್ ಮತ್ತು ಕುಸಲ್ ಮೆಂಡಿಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಇಂಗ್ಲೆಂಡ್ ಹಾಗೂ ಟೆಂಬಾ ಬವುಮಾ ಅವರ ದಕ್ಷಿಣ ಆಫ್ರಿಕಾ ಟೀಮ್ ಸೆಣೆಸಾಟ ನಡೆಸಲಿದೆ.

ನೆದರ್ಲೆಂಡ್ಸ್ ತಂಡ ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನೀಡಿದ ಪ್ರದರ್ಶನ ಎಲ್ಲರ ಹುಬ್ಬೇರುವಂತೆ ಮಾಡಿದೆ. ಇಲ್ಲಿ ಡಚ್ಚರು 38 ರನ್​ಗಳಿಂದ ಗೆದ್ದು ಬೀಗಿದ್ದರು. ಟೂರ್ನಿಯಲ್ಲಿ ಒಂದೇ ಒಂದು ಗೆಲುವು ಕಾಣದ ಲಂಕಾ ವಿರುದ್ಧ ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ.

ಏಷ್ಯಾಕಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಸಿಂಹಳೀಯರು ವಿಶ್ವಕಪ್​ನಲ್ಲಿ ಮಂಕಾಗಿದ್ದಾರೆ. ಜೊತೆಗೆ ದಸುನ್ ಶನಕಾ, ಹಸರಂಗ ಅಂತಹ ಸ್ಟಾರ್ ಆಟಗಾರರ ಅಲಭ್ಯತೆ ಎದ್ದು ಕಾಣುತ್ತಿದೆ. ನೆದರ್ಲೆಂಡ್ಸ್ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ ಲಂಕಾನ್ನರು ಖಾತೆ ತೆರೆಯುವ ಪ್ಲಾನ್​ನಲ್ಲಿದ್ದಾರೆ.

ನೆದರ್ಲೆಂಡ್ಸ್ ವಿರುದ್ಧ ಸೋತು ಮುಖಭಂಗಕ್ಕೆ ಒಳಗಾಗಿರುವ ಆಫ್ರಿಕಾ ಪುಟಿದೇಳಲು ನೋಡುತ್ತಿದೆ. ಹೀಗಿದ್ದರೂ ಪಾಯಿಂಟ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ತಂಡದಲ್ಲಿ ಸ್ಟಾರ್ ಅನುಭವಿ ಆಟಗಾರರಿದ್ದಾರೆ. ಮೊದಲ ಎರಡು ಪಂದ್ಯದಲ್ಲಿ ಆಫ್ರಿಕಾ ಭರ್ಜರಿ ಪ್ರದರ್ಶನ ತೋರಿತ್ತು. ಅದೇ ಲಯದಲ್ಲಿ ಆಟವಾಡಬೇಕು.

ಇತ್ತ ಹಾಲಿ ಚಾಂಪಿಯನ್ ಇಂಗ್ಲೆಂಡ್ ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಸೋತಿದೆ. ಸಂಘಟಿತ ಪ್ರದರ್ಶನ ನೀಡುವಲ್ಲಿ ತಂಡ ಎಡವುತ್ತಿದೆ. ಬಟ್ಲರ್ ನಾಯಕತ್ವ ಸದ್ದು ಮಾಡುತ್ತಿಲ್ಲ. ಹೀಗಾಗಿ ಎರಡು ಬಲಿಷ್ಠ ತಂಡಗಳ ನಡುವಣ ಕಾದಾಟದ ಮೇಲೆ ಎಲ್ಲರ ಕಣ್ಣಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು