Categories: ಕ್ರೀಡೆ

ಮೈಸೂರಿನಲ್ಲಿ ಓಪನ್ ಟೆನಿಸ್ ಟೂರ್ನಿಗೆ ಚಾಲನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾ.28 ರಿಂದ ಏ.2 ರವರೆಗೆ ಸೈಕಲ್ ಪ್ಯೂರ್ ಅಗರ್‌ಬತ್ತಿ ಐಟಿಎ ಮೈಸೂರು ಓಪನ್-2023 ಟೆನ್ನಿಸ್ ಟೂರ್ನಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯ ಟೆನ್ನಿಸ್ ಸಂಸ್ಥೆಯ ಆಶ್ರಯದಲ್ಲಿ ಚಾಮರಾಜಪುರಂನ ಮೈಸೂರು ಟೆನ್ನಿಸ್ ಕ್ಲಬ್ ಅಂಗಳದಲ್ಲಿ 8 ವರ್ಷಗಳ ನಂತರ ಸೈಕಲ್ ಪ್ಯೂರ್ ಅಗರಬತ್ತಿ ಕಂಪನಿಯ ಪ್ರಾಯೋಕತ್ವದಲ್ಲಿ ಈ ಟೂರ್ನಿ ಆಯೋಜಿಸಲಾಗುತ್ತಿದೆ. 20.5 ಲಕ್ಷ (25 ಸಾವಿರ ಡಾಲರ್) ಪ್ರಶಸ್ತಿ ಮೊತ್ತವನ್ನು ಹೊಂದಿರುವ ಈ ಟೂರ್ನಿಯನ್ನು ಸ್ಥಳೀಯ ಕ್ರೀಡಾಸಕ್ತರು ವೀಕ್ಷಿಸಬೇಕೆಂದು ಎಂದು ಮನವಿ ಮಾಡಿದರು.

ರಾಜ್ಯ, ಅಂತಾರಾಜ್ಯದ ಟೆನ್ನಿಸ್ ಪ್ರಿಯರು ಬಂದು ಕ್ರೀಡೆಯನ್ನು ವೀಕ್ಷಿಸುವುದರ ಜತೆಗೆ ಮೈಸೂರಿನ ಪ್ರವಾಸಿತಾಣಗಳನ್ನು ವೀಕ್ಷಿಸಬಹುದಾಗಿದೆ. ನಮ್ಮ ಭಾಗದ ಮೈಸೂರಿನ ಮನೀಷ್, ಗಣೇಶ್ ಹಾಗೂ ಆರ್.ಸೂರಜ್ ಪ್ರಬೋದ್, ಬೆಂಗಳೂರಿನ ರಿಷಿ ರೆಡ್ಡಿ, ಗುಜರಾತ್‌ನ ಮಾಧವ್ ಕಾಮತ್ ಅವರಿಗೆ ವೈಲ್ಡ್ ಕಾರ್ಡ್ ಪ್ರವೇಶ ನೀಡಲಾಗಿದೆ. ಇದರಿಂದ ಮಾತ್ರವಲ್ಲದೇ ಮೈಸೂರಿನ ಕ್ರೀಡಾಪಟುಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.

ಸೈಕಲ್ ಪ್ಯೂರ್ ಅಗರ್‌ಬತ್ತೀಸ್‌ನ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ ಮಾತನಾಡಿ, ಮಂಗಳವಾರದಿAದ ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಿವೆ. ಟೆನ್ನಿಸ್ ಜನಪ್ರಿಯ ಕ್ರೀಡೆಯಾಗಿದ್ದು ಹಲವು ವರ್ಷಗಳ ನಂತರ ಮೈಸೂರಿನಲ್ಲಿ ಆಯೋಜಿಸಲಾಗಿದೆ. ಸಾಂಸ್ಕöÈತಿಕ ನಗರಿಯಲ್ಲಿ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.

ಬಳಿಕ ಅರ್ಜುನ್ ರಂಗ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಸ್ವತಃ ಟೆನಿಸ್ ಆಟವಾಡುವ ಮೂಲಕ ಆಟಗಾರರನ್ನು ಪ್ರೋತ್ಸಾಹಿಸಿದರು.

ಐಟಿಎ ಮೇಲ್ವಿಚಾರಕ ಶ್ರೀಲಂಕಾದ ಧರಕ ಇಲವಾಲ, ಮೈಸೂರು ಟೆನಿಸ್ ಕ್ಲಬ್ ಅಧ್ಯಕ್ಷ ಎ.ಆರ್.ಅಲಗಪ್ಪನ್, ಸ್ಕಾವರಾನ್ ಲ್ಯಾಬರಟರೀಸ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಅಲೆಕ್ಸ್ ಚೆರಿಯನ್ ಹಾಗೂ ಇತರರು ಇದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago