Categories: ಕ್ರೀಡೆ

ದೆಹಲಿಯಲ್ಲಿ ಕ್ರೀಡಾಪಟುಗಳ ಪ್ರತಿಭಟನೆ: 700 ಮಂದಿಯ ಬಂಧನ, ಬಿಡುಗಡೆ

ನವದೆಹಲಿ: ದೆಹಲಿಯಲ್ಲಿ ಕ್ರೀಡಾಪಟುಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಂತರ್ ಮಂತರ್‌ ಸೇರಿದಂತೆ ದೆಹಲಿಯಾದ್ಯಂತ ಒಟ್ಟಾರೆ 700 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಂಧನದಲ್ಲಿದ್ದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಸೇರಿದಂತೆ ಎಲ್ಲಾ ಮಹಿಳಾ ಪ್ರತಿಭಟನಾಕಾರರನ್ನು ಭಾನುವಾರ ಸಂಜೆ ಬಿಡುಗಡೆ ಮಾಡಲಾಯಿತು. ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಕುಸ್ತಿಪಟುಗಳು ಕರೆ ನೀಡಿದ್ದರು.

ಕಳೆದ ವಾರ ಭಾನುವಾರ, ಹರ್ಯಾಣದ ಮೆಹಮ್ ಪಟ್ಟಣದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿ ಐದು ಗಂಟೆಗಳ ಕಾಲ ಖಾಪ್ ಮಹಾಪಂಚಾಯತ್ ನಡೆಸಿದ್ದರು.

Sneha Gowda

Recent Posts

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

12 mins ago

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ…

28 mins ago

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

8 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

9 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

9 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

9 hours ago