ಲಾಹೋರ್: ಪಾಕಿಸ್ತಾನ್ ಸೂಪರ್ ಲೀಗ್ನ 2ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ ವಿಶೇಷ ದಾಖಲೆ ಬರೆದಿದ್ದಾರೆ.
ಲಾಹೋರ್ನ ಗದ್ದಾಫಿ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡಗಳು ಮುಖಾಮುಖಿಯಾಗಿತ್ತು.
ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ಬ ಆಝಂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 42 ಎಸೆತಗಳನ್ನು ಎದುರಿಸಿದ ಬಾಬರ್ 4 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 68 ರನ್ ಬಾರಿಸಿದರು.
ಬಾಬರ್ ಆಝಂ ಅವರ ಈ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಸೋಲುಂಡಿದೆ.
ಈ ಅರ್ಧಶತಕದೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ 3 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಬಾಬರ್ ಆಝಂ ಪಾತ್ರರಾದರು. ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಇದುವರೆಗೆ 78 ಇನಿಂಗ್ಸ್ ಆಡಿರುವ ಬಾಬರ್ ಆಝಂ 3003 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ.