ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ನಡೆಯಲಿರುವ 22ನೇ ಪಂದ್ಯದಲ್ಲಿ ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ತಲಾ ಎರಡರಲ್ಲಿ ಸೋಲು-ಗೆಲುವು ಕಂಡಿರುವ ಪಾಕ್ಗೆ ಈ ಪಂದ್ಯ ಮಹತ್ವದ್ದಾಗಿದೆ. ಪಾಯಿಂಟ್ ಟೇಬಲ್ನಲ್ಲಿ ಮೇಲೇಳಲು ಬಾಬರ್ ಪಡೆಗೆ ಇದೊಂದು ಉತ್ತಮ ಅವಕಾಶ.
ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.