ಪ್ಯಾರಿಸ್: 22 ವರ್ಷದ ಯುವ ಶಟ್ಲರ್ ಲಕ್ಷ್ಯ ಸೇನ್, ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸುವ ಅವಕಾಶವನ್ನು ಕೈಚೆಲ್ಲಿದ್ದಾರೆ. ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಮಲೇಷ್ಯಾದ ಲೀ ಝಿ ಜಿಯಾ ವಿರುದ್ದ ಆಘಾತಕಾರಿ ಸೋಲು ಕಾಣುವ ಮೂಲಕ ಒಲಿಂಪಿಕ್ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದರು. ಮಲೇಷ್ಯಾದ ಲೀ ಝಿ ಜಿಯಾ 13-21, 21-16, 21-11 ಅಂತರದಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.

ತೀಯ ಗೇಮ್‌ನಲ್ಲಿ ಲಕ್ಷ್ಯ ಸೇನ್ ಆರಂಭಿಕ ಮುನ್ನಡೆ ಸಾಧಿಸಿದರಾದರೂ, ಆ ಬಳಿಕ ಮಲೇಷ್ಯಾದ ಲೀ ಝಿ ಜಿಯಾ ತಿರುಗೇಟು ನೀಡುವಲ್ಲಿ ಯಶಸ್ವಿಯಾದರು. ಎರಡನೇ ಗೇಮ್‌ನಲ್ಲಿ ಒಂದು ಹಂತದಲ್ಲಿ 12-12ರ ಸಮಬಲದ ಹೋರಾಟ ಕಂಡು ಬಂದಿತು. ಆದರೆ ಆ ಬಳಿಕ ಮತ್ತಷ್ಟು ಆಕ್ರಮಣಕಾರಿ ಆಟವಾಡಿದ ಲೀ ಝಿ ಜಿಯಾ 21-16 ಅಂತರದಲ್ಲಿ ಗೆಲುವಿನ ನಗೆ ಬೀರಿದರು.