ಪ್ಯಾರಿಸ್: ಮಹಿಳೆ ಗರ್ಭಿಣಿಯಾಗುತ್ತಿದ್ದಂತೆ ಅವಳಿಗೆ ಹೆಚ್ಚಿನ ಆರೈಕೆ ಅಗತ್ಯ ಆದರೆ ಇಲ್ಲಿ ಕ್ರೀಡಾಪಟು ನಾದ ಹಫೀಜ್‌ ತಮ್ಮ ಪ್ರೆಗ್ನೆನ್ಸಿ ಸಮಯದಲ್ಲೂ ಪ್ಯಾರಿಸ್ ಒಲಿಂಪಿಕ್ಸ್‌ ಫೆನ್ಸಿಂಗ್‌ನಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 26 ವರ್ಷ ನಾದಾ, ವಿಶ್ವ ನಂ.10ನೇ ಶ್ರೇಯಾಂಕಿತ ಯುಎಸ್‌ಎಯ ಎಲಿಜಬೆತ್ ಟಾರ್ಟಕೋವ್ಕ್ಸಿ ವಿರುದ್ಧ 15-13 ಅಂಕಗಳ ಅಂತರದ ಭರ್ಜರಿ ಗೆಲುವು ಸಾಧಿಸಿ ಮಿಂಚಿದ್ದಾರೆ. ಆದರೆ ಇದಾದ ಬಳಿಕ 16ರ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಜಿಯೋನ್ ಹೇಯಂಗ್ ಎದುರು ಸೋಲು ಕಾಣುವ ಮೂಲಕ ಅಭಿಯಾನ ಮುಗಿಸಿದ್ದಾರೆ

ಮೊದಲ ಹೋರಾಟದ ಗೆಲುವಿನ ಬಳಿಕ ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬಹಿರಂಗಪಡಿಸಿರುವ ಅವರು, ‘ಪುಟ್ಟ ಒಲಿಂಪಿಯನ್ ಒಬ್ಬರನ್ನು ಜೊತೆಯಲ್ಲಿಟ್ಟುಕೊಂಡು ಆಡುತ್ತಿದ್ದೇನೆ’ ಎಂದು ಬರೆದಿದ್ದಾರೆ.