ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಷಾ ಅವಿರೋಧವಾಗಿ ಆಯ್ಕೆಯಾಗಿದ್ದು, ಪಾಕಿಸ್ತಾನ ಸೇರಿದಂತೆ ಎಲ್ಲಾ ದೇಶಗಳ ಕ್ರಿಕೆಟ್ ಮಂಡಳಿಗಳು ಜಯ್ ಷಾ ಆಯ್ಕೆಯನ್ನು ಬೆಂಬಲಿಸಿದ್ದು, ಡಿಸೆಂಬರ್ 01ರಂದು ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಜಯ್ ಷಾ ಅವರ ಆಯ್ಕೆ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಅಲ್ಲಿನ ಕ್ರಿಕೆಟ್ ಮಂಡಳಿ ಸದಸ್ಯರು ಹೇಳಿಕೆಗಳನ್ನು ಕೊಡುತ್ತಿದ್ದು, ಇದೀಗ ಪಿಸಿಬಿ ಅಧ್ಯಕ್ಷ ಮೊಹ್ನಿನ್ ನಖ್ವಿ ಕೂಡ ಮಾತನಾಡಿದ್ದಾರೆ.
ಏಕೆಂದರೆ ಮುಂದಿನ ವರ್ಷ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಹಾಲಿ ಚಾಂಪಿಯನ್ಸ್ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದ್ದು, ಭದ್ರತೆಯ ಕಾರಣದಿಂದಾಗಿ ಭಾರತ ಪಾಕ್ಗೆ ಕಾಲಿಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ. ಆದರೆ, ಭಾರತ ಪಾಕಿಸ್ತಾನಕ್ಕೆ ಆಡಲು ಬರುತ್ತದೆ ಎಂಬ ನಂಬಿಕೆಯಿಂದ ಐಸಿಸಿ ಅಧ್ಯಕ್ಷ ಹುದ್ದೆಗೆ ಜಯ್ ಷಾ ಆಯ್ಕೆಯನ್ನು ಪಿಸಿಬಿ ಬೆಂಬಲ ಸೂಚಿಸಿದ್ದು, ಈ ಒಂದು ಕಾರಣಕ್ಕಾಗಿಯೇ ಎಂದು ಹೇಳಲಾಗಿದೆ.
ಈ ಕುರಿತು ಮಾತನಾಡಿರುವ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ನಾವು ಜಯ್ ಷಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಅವರು ಅಧ್ಯಕ್ಷರಾಗಿರುವ ಬಗ್ಗೆ ನಮಗೇನು ಕಾಳಜಿ ಇಲ್ಲ. ಸೆಪ್ಟೆಂಬರ್ 8 ಮತ್ತು 9ರಂದು ನಡೆಯಲಿದ್ದು, ನನ್ನ ಬದಲಾಗಿ ಪಿಸಿಬಿ ವತಿಯಿಂದ ಬೇರೊಬ್ಬರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ನೂತನ ಅಧ್ಯಕ್ಷರಿಗೆ ಸಂಬಂಧಿಸಿದ ವಿಷಯಗಳನ್ನು ಅಂತಿಮಗೊಳಿಸಲಾಗುವುದು ಎಂದು ನಖ್ವಿ ಹೇಳಿದ್ದಾರೆ.