News Karnataka Kannada
Thursday, May 09 2024
ಕ್ರೀಡೆ

ಇಂದು ಏಷ್ಯನ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

PM Modi interacts with Asian Games medal winners today
Photo Credit : News Kannada

ನವದೆಹಲಿ: ಪ್ರಧಾನಿ ಮೋದಿ ಅವರು ಅ.10ರ ಇಂದು ಸಂಜೆ 4:30 ಕ್ಕೆ ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಏಷ್ಯನ್ ಗೇಮ್ಸ್ 2023 ರಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಮಾತನಾಡಲಿದ್ದಾರೆ.

ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ‘ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಅಮೋಘ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲು ತಲುಪಿರುವುದು ಭಾತೀಯರನ್ನು ರೋಮಾಂಚನಗೊಳಿಸುವಂತೆ ಮಾಡಿದೆ. ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ಪದಕಗಳನ್ನು ಜಯಿಸಿದ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಕಾಯುತ್ತಿದ್ದೇನೆ ಎಂದು ಬರದುಕೊಂಡಿದ್ದರು. ಅದರಂತೆ ಇಂದು ಸಂವಾದ ನಡೆಸಲಿದ್ದಾರೆ.

ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಒಟ್ಟು 107 ಪದಕಗಳನ್ನು ಗೆದ್ದಿದ್ದಾರೆ, ಇದು 2018 ರ ಜಕಾರ್ತಾ ಆವೃತ್ತಿಯಲ್ಲಿ 70 ಪದಕಗಳ ಹಿಂದಿನ ದಾಖಲೆಯನ್ನು ಮೀರಿಸಿದೆ. ಏಷ್ಯನ್ ಗೇಮ್ಸ್ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವು ಪ್ರಧಾನಿಯವರ ಪ್ರಯತ್ನವಾಗಿದೆ. ಇನ್ನು ಒಟ್ಟು 107 ಪದಕಗಳಲ್ಲಿ ಭಾರತ 28 ಚಿನ್ನ, 28 ಬೆಳ್ಳಿ ಮತ್ತು 41 ಕಂಚಿನ ಪದಕಗಳನ್ನು ಗೆದ್ದಿದೆ. ಏಷ್ಯನ್ ಗೇಮ್ಸ್ನಲ್ಲಿ ಗೆದ್ದ ಒಟ್ಟು ಪದಕಗಳ ಸಂಖ್ಯೆಯ ದೃಷ್ಟಿಯಿಂದ ಇದು ಭಾರತದ ಅತ್ಯುತ್ತಮ ಪ್ರದರ್ಶನವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು