Categories: ಕ್ರೀಡೆ

ಪ್ರಧಾನಿ ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂಗೆ ಹೋಗಬಾರದಿತ್ತು: ಕೀರ್ತಿ ಆಜಾದ್

ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ ನಲ್ಲಿ ಭಾರತ ಸೋಲು ಕಂಡಿತ್ತು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೀರ್ತಿ ಆಜಾದ್ ಅವರು, “ಡ್ರೆಸ್ಸಿಂಗ್ ರೂಮ್ ಯಾವುದೇ ತಂಡದ ಪವಿತ್ರ ಸ್ಥಳವಾಗಿದೆ. ಐಸಿಸಿ ಈ ಕೊಠಡಿಗಳಿಗೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶಿಸಲು ಅನುಮತಿಸುವುದಿಲ್ಲ. ಹೀಗಾಗಿ ಪ್ರಧಾನಿ ಮೋದಿ ಅವರು ಖಾಸಗಿ ಸಂದರ್ಶಕರ ಭೇಟಿ ಪ್ರದೇಶದಲ್ಲಿ, ಡ್ರೆಸ್ಸಿಂಗ್ ರೂಮ್ ಹೊರಗೆ ತಂಡವನ್ನು ಭೇಟಿಯಾಗಬೇಕಿತ್ತು. ನಾನು ಇದನ್ನು ಒಬ್ಬ ಕ್ರೀಡಾಪಟುವಾಗಿ ಹೇಳುತ್ತೇನೆ. ರಾಜಕಾರಣಿಯಾಗಿ ಅಲ್ಲ ಎಂದಿದ್ದಾರೆ.

ನರೇಂದ್ರ ಮೋದಿ ಅವರು ತಮ್ಮ ಬೆಡ್ ರೂಮ್, ಡ್ರೆಸ್ಸಿಂಗ್ ರೂಮ್ ಅಥವಾ ಟಾಯ್ಲೆಟ್‌ನಲ್ಲಿ ತಮ್ಮ ಬೆಂಬಲಿಗರು ಬಂದು ಸಾಂತ್ವನ ಹೇಳಲು ಅಥವಾ ಅಭಿನಂದಿಸಲು ಅನುಮತಿಸುತ್ತಾರೆಯೇ? ಕ್ರೀಡಾ ಪಟುಗಳು ರಾಜಕಾರಣಿಗಳಿಗಿಂತ ಹೆಚ್ಚು ಶಿಸ್ತುಬದ್ಧರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಪ್ರಧಾನಿ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

“ಕೊನೆಯದಾಗಿ, ವ್ಯಕ್ತಿ ಮತ್ತು ಅವರ ತಂಡ ಭಾರತಕ್ಕಾಗಿ ಇದನ್ನು ಮಾಡಿದೆ, 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರನ್ನು ಆಹ್ವಾನಿಸಲಾಗಿಲ್ಲ. ಈಗ ಹೇಳಿ ಯಾರು ರಾಜಕೀಯ ಮಾಡುತ್ತಿದ್ದಾರೆ?”‌

Umesha HS

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

9 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

24 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago