ಜೈಪುರ : ಕಳೆದ ಕೆಲ ವಾರಗಳ ಹಿಂದೆಯಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು, ಇದರ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಐಪಿಎಲ್ 2025 ರ ಸಂದರ್ಭದಲ್ಲಿ ದಯಾಳ್ 17 ವರ್ಷದ ಅಪ್ರಾಪ್ತ ವಯಸ್ಕನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಇದೀಗ ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ ದಯಾಳ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಸುಮಾರು ಎರಡು ವರ್ಷಗಳ ಕಾಲ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವರದಿಯ ಪ್ರಕಾರ, ಸಂತ್ರಸ್ತ ಬಾಲಕಿಗೆ ದಯಾಳ್ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಭರವಸೆ ಸೀತಾಪುರದ ಹೋಟೆಲ್ ವೊಂದಕ್ಕೆ ಕರೆಸಿಕೊಂಡಿದ್ದರು.

ಈ ವೇಳೆ ಇಲ್ಲಸಲ್ಲದ ಆಸೆಗಳನ್ನು ಹುಟ್ಟಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು ಎನ್ನಲಾಗಿದೆ. ಇನ್ನು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದಾಗ ಆಕೆಗೆ 17 ವರ್ಷ ವಯಸ್ಸಾಗಿತ್ತು. ಈ ಹಿನ್ನಲೆ ಯಶ್ ದಯಾಳ್ ವಿರುದ್ಧ ಪೋಕ್ಸೋ  ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ.

ಜೈಪುರ ಪೊಲೀಸರ ಪ್ರಕಾರ, ಯಶ್ ದಯಾಳ್, ಆರ್‌ಆರ್ vs ಆರ್‌ಸಿಬಿ ಪಂದ್ಯಕ್ಕಾಗಿ ಜೈಪುರದಲ್ಲಿದ್ದಾಗ, ಸಂತ್ರಸ್ತೆಯನ್ನು ಸೀತಾಪುರ ಪ್ರದೇಶದ ಬಳಿಯ ಹೋಟೆಲ್‌ಗೆ ಕರೆಸಿ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಭಾವನಾತ್ಮಕ ಬ್ಲ್ಯಾಕ್‌ಮೇಲ್ ಮತ್ತು ದೈಹಿಕ ಮತ್ತು ಮಾನಸಿಕ ಕಿರುಕುಳದಿಂದ ಬೇಸತ್ತು ಸಂತ್ರಸ್ತೆ ಜುಲೈ 23 ರಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಇನ್ನು ಈ ಹಿಂದೆ ಯುವತಿಯೊಬ್ಬರು ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದರು. ಈ ಸಂಬಂಧ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆದರೆ ಈ ಪ್ರಕರಣದ ಬಗ್ಗೆ ಯಶ್ ದಯಾಳ್, ತನ್ನ ಬಂಧನಕ್ಕೆ ತಡೆ ನೀಡುವುದರ ಜೊತೆ ತನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಮುಂದಿನ ವಿಚಾರಣೆ ನಡೆಸುವವರೆಗೂ ದಯಾಳ್‌ ಅವರನ್ನು ಬಂಧಿಸದಿರುವಂತೆ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಇದೀಗ ದಯಾಳ್‌ ವಿರುದ್‌ ಮತ್ತೊಂತು ಅತ್ಯಾಚಾರ ಪ್ರಕರಣ ಕೇಳಿ ಬಂದಿದೆ.