ಮುಂಬೈ: 11ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಅಕ್ಟೋಬರ್ 18ರಿಂದ ಆರಂಭಗೊಳ್ಳುವುದಾಗಿ ಟೂರ್ನಿಯ ಆಯೋಜಕರು ಘೋಷಿಸಿದ್ದಾರೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್ ಮಾದರಿಯಲ್ಲಿ ಹೈದರಾಬಾದ್, ನೋಯ್ತಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅಕ್ಟೋಬರ್ 18ರಿಂದ ಹೈದರಾಬಾದ್‌ನಲ್ಲಿ ಪಂದ್ಯಗಳು ಆರಂಭಗೊಳ್ಳಲಿದ್ದು, ಬಳಿಕ ನ.10ರಿಂದ ನೋಯ್ಡಾ ಹಾಗೂ ಡಿ.3ರಿಂದ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಹಿಂದಿನ ಬಹುತೇಕ ಎಲ್ಲಾ ಆವೃತ್ತಿ ಗಳಲ್ಲೂ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುತ್ತಿದ್ದವು. 2021 ರಲ್ಲಿ ಸಂಪೂರ್ಣ ಲೀಗ್ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿತ್ತು. ಕಳೆದೆರಡು ಬಾರಿಯೂ ಕಂಠೀರವ ಕ್ರೀಡಾಂಗಣ ದಲ್ಲಿ ಪಂದ್ಯಗಳು ನಡೆದಿದ್ದವು. ಆದ್ರೆ ಈ ಬಾರಿ ಇಲ್ಲ.
11ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್‌ನ ಆಟಗಾರರ ಹರಾಜು ಪ್ರಕ್ರಿಯೆ ಕೆಲ ದಿನಗಳ ಕೊನೆಗೊಂಡಿದ್ದು, ಒಟ್ಟು 118 ಆಟಗಾರರು 12 ತಂಡಗಳಿಗೆ ಹರಾಜಾಗಿದ್ದಾರೆ. ಪಿಕೆಎಲ್ ಇತಿಹಾಸದಲ್ಲೇ ಮೊದಲ ಬಾರಿ 8 ಆಟಗಾರರು ತಲಾ ₹1 ಕೋಟಿಗಿಂತ ಹೆಚ್ಚು ಮೊತ್ತ ಪಡೆದುಕೊಂಡಿದ್ದಾರೆ.

