ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಸತತ ಸೋಲಿನ ಸುಳಿಗೆ ಸಿಲುಕಿರುವ ಶ್ರೇಯಸ್ ಐಯ್ಯರ್ ಪಡೆಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ 13 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಪಂಜಾಬ್ ತಂಡ ನಾಕೌಟ್ ಹಂತಕ್ಕೆ ಪ್ರವೇಶಿಸಲು ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಪಂಜಾಬ್ ಇಂದಿನ ಪಂದ್ಯದಲ್ಲಿ ಗೆದ್ದರೆ 15 ಅಂಕಗಳೊಂದಿಗೆ ರಾಜಸ್ಥಾನ್ ತಂಡವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೆ ಜಿಗಿಯಲಿದೆ.
ಆರ್‌ಆರ್ ತಂಡ 14 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿಯಲಿದೆ. ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಕೊನೆಯ ಪಂದ್ಯದ ಫಲಿತಾಂಶದ ಮೇಲೆ ಪಂಜಾಬ್ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ರಾಜಸ್ಥಾನ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಸೋತರೆ ಅಯ್ಯರ್ ಪಡೆ ಪ್ಲೇಆಫ್‌ಗೆ ಲಗ್ಗೆ ಇಡಲಿದೆ.

