Bengaluru 25°C
Ad

ಈ ಬಾರಿಯು ಆರ್‌ಸಿಬಿ ಪಾಲಿಗೆ ಒಲಿಯದ ಕಪ್‌ : ಕ್ವಾಲಿಫೈಯರ್​​ 2ಗೆ ಎಂಟ್ರಿ ಕೊಟ್ಟ ರಾಜಸ್ಥಾನ್

ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ವಿರುದ್ಧ ಸೋತ ನಂತರ ಐಪಿಎಲ್ 2024 ರ (IPL 2024) ಎಲಿಮಿನೇಟರ್​ ಹಂತದಲ್ಲಿಯೇ ರೆಡ್​ಆರ್ಮಿ ಹೊರಕ್ಕೆ ಬಿತ್ತು.

ಬೆಂಗಳೂರು: ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ವಿರುದ್ಧ ಸೋತ ನಂತರ ಐಪಿಎಲ್ 2024 ರ (IPL 2024) ಎಲಿಮಿನೇಟರ್​ ಹಂತದಲ್ಲಿಯೇ ರೆಡ್​ಆರ್ಮಿ ಹೊರಕ್ಕೆ ಬಿತ್ತು. ಆರು ಪಂದ್ಯಗಳ ಗೆಲುವಿನ ನಂಬಲಾಗದ ಓಟವನ್ನು ಮುಂದುವರಿಸಲಿಲ್ಲ. ಮತ್ತದೇ ಹಳೆ ರಾಗವೆಂಬಂತೆ ಸೋಲಿನ ಸುಳಿಗೆ ಸಿಲುಕಿ ಕೋಟ್ಯಂತರ ಅಭಿಮಾನಿಗಳಿಗೆ ಬೇಸರ ಮೂಡಿಸಿದರು. ಆದರೂ ಈ ಬಾರಿಯ ಅವರ ರೋಚಕ ಆಟ ಅಭಿಮಾನಿಗಳ ಮನ ಗೆದ್ದಿದೆ.

ಬೌಲರ್​ಗಳ ಸಂಘಟಿತ ಹೋರಾಟ ಹಾಗೂ ಯಶಸ್ವಿ ಜೈಸ್ವಾಲ್ (45 ರನ್​) ಹಾಗೂ ರಿಯಾನ್ ಪರಾಗ್​ (36 ರನ್​) ಬ್ಯಾಟಿಂಗ್ ಬಲದಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ 2024ರ (IPL 2024) ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿದೆ.

ಲೀಗ್ ಹಂತದಲ್ಲಿ ಸತತ ನಾಲ್ಕು ಸೋಲು ಹಾಗೂ ಮಳೆಯಿಂದಾಗಿ ಒಂದು ಪಂದ್ಯ ರದ್ದುಗೊಂಡ ಕಾರಣ ಬೇಸರಕ್ಕೆ ಒಳಗಾಗಿದ್ದ ರಾಜಸ್ಥಾನ್ ಬಳಗ ಈ ಗೆಲುವಿನೊಂದಿಗೆ ಖುಷಿ ಕಂಡು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶ ಪಡೆಯಿತು. ಅಲ್ಲಿ ಸಂಜು ಬಳಗ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ ರೈಸರ್ಸ್​ ಹೈದರಾಬಾದ್​ ತಂಡವನ್ನು ಎದುರಿಸಲಿದೆ.

Ad
Ad
Nk Channel Final 21 09 2023
Ad