News Karnataka Kannada
Monday, April 29 2024
ಕ್ರೀಡೆ

‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಗೆ ಹೊಸ ಕೋಚ್ ನೇಮಕ

Rcb coach
Photo Credit : News Kannada

ಬೆಂಗಳೂರು: 16 ಆವೃತ್ತಿ ಕಳೆದರೂ ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ಬಳಗವನ್ನ ಬದಲಾಯಿಸಿದ್ದು, ಜಿಂಬಾಬ್ವೆಯ ದಿಗ್ಗಜ ಕ್ರಿಕೆಟಿಗ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಜಿ ಮುಖ್ಯ ಕೋಚ್ ಆಂಡಿ ಫ್ಲವರ್ ಅವರನ್ನ ಆರ್‌ಸಿಬಿ ಮುಖ್ಯಕೋಚ್ ಆಗಿ ನೇಮಿಸಿಕೊಂಡಿದೆ.

16 ಆವೃತ್ತಿಗಳಲ್ಲಿ ಮೂರ್ನಾಲ್ಕು ಬಾರಿ ಆರ್‌ಸಿಬಿ ತಂಡವನ್ನ ಪ್ಲೇ ಆಫ್ ತಲುಪಿಸುವಲ್ಲಿ ಯಶಸ್ವಿಯಾದರೂ ಒಂದು ಬಾರಿಯೂ ಟ್ರೋಫಿ ಗೆಲ್ಲದೇ ನಿರಾಸೆಗೊಂಡಿತ್ತು. 2023ರ 16ನೇ ಆವೃತ್ತಿಯ ಕೊನೆ ಪಂದ್ಯದಲ್ಲೂ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ್ದ ಆರ್‌ಸಿಬಿ ತಂಡ ಪ್ಲೇ ಆಫ್‌ನಿಂದ ಹೊರಬಿದ್ದಿತ್ತು.

ಈ ಹಿನ್ನೆಲೆಯಲ್ಲಿ ಕೋಚಿಂಗ್ ಬಳಗವನ್ನ ಆರ್ ಸಿ ಬಿ ಫ್ರಾಂಚೈಸಿ ಬದಲಾಯಿಸಿದೆ. ತಂಡದ ಕ್ರಿಕೆಟ್ ಡೈರೆಕ್ಟರ್ ಮೈಕ್ ಹೇಸನ್ ಮತ್ತು ಮುಖ್ಯ ಕೋಚ್ ಸಂಜಯ್ ಬಾಂಗರ್ ಜೊತೆಗಿನ ಒಪ್ಪಂದ ಅಂತ್ಯಗೊಳಿಸಿದೆ.

ಐಸಿಸಿ ಹಾಲ್ ಆಫ್ ಫೇಮರ್ ಮತ್ತು ಟಿ20 ವಿಶ್ವಕಪ್ ವಿಜೇತ ಕೋಚ್ ಆಂಡಿ ಫ್ಲವರ್ ಅವರನ್ನು ಆರ್‌ಸಿಬಿ ಪುರುಷರ ತಂಡದ ಮುಖ್ಯ ಕೋಚ್ ಆಗಿ ಸ್ವಾಗತಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಆರ್‌ಸಿಬಿ ಹೇಳಿಕೆಯಲ್ಲಿ ತಿಳಿಸಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು