News Karnataka Kannada
Monday, April 29 2024
ಕ್ರೀಡೆ

ಆರ್​ಸಿಬಿ ತಂಡಕ್ಕೆ ಹೊಸ ನಿರ್ದೇಶಕರ ನೇಮಕ

RCB appoint new director
Photo Credit : News Kannada

2024ರ ಐಪಿಎಲ್ ಆರಂಭಕ್ಕೂ ಮುನ್ನ ತಂಡದಲ್ಲಿ ಹಲವು ಪ್ರಮುಖ ಬದಲಾವಣೆಗಳಿಗೆ ಕೈಹಾಕಿರುವ ಆರ್​ಸಿಬಿ ಫ್ರಾಂಚೈಸ್ ಇದೀಗ ತಂಡಕ್ಕೆ ನೂತನ ನಿರ್ದೇಶಕರನ್ನು ನೇಮಕ ಮಾಡಿದೆ. ಈ ಮಾಹಿತಿಯನ್ನು ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫ್ರಾಂಚೈಸ್, ಇಂಗ್ಲೆಂಡ್ ತಂಡದ ಪ್ರದರ್ಶನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮೊ ಬೊಬಾಟ್ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದೆ.

ಈ ಬಗ್ಗೆ ತನ್ನ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ಫ್ರಾಂಚೈಸ್, ‘ಆರ್‌ಸಿಬಿ ತಂಡದ ನಿರ್ದೇಶಕರಾಗಿ ಮೊ ಬೊಬಾಟ್ ಅವರನ್ನು ನೇಮಿಸಲಾಗಿದೆ. 2019 ರಿಂದ ಇಂಗ್ಲೆಂಡ್ ಕ್ರಿಕೆಟ್‌ ತಂಡದ ಪ್ರದರ್ಶನ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಬೊಬಾಟ್, 12 ವರ್ಷಗಳ ಕಾಲ ಇಸಿಬಿ ಸೆಟಪ್‌ನ ಭಾಗವಾಗಿದ್ದಾರೆ.

ಈ ಸಮಯದಲ್ಲಿ ಇಂಗ್ಲೆಂಡ್ ಟಿ20 ಮತ್ತು ಏಕದಿನ ವಿಶ್ವಕಪ್‌ಗಳನ್ನು ಎತ್ತಿಹಿಡಿದಿದೆ. ಅಲ್ಲದೆ ಬೊಬಾಟ್ ಅವರು, ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಆಂಡಿ ಫ್ಲವರ್ ಅವರೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡಿದ್ದಾರೆ’ ಎಂದು ಪೋಸ್ಟ್‌ನಲ್ಲಿ ಬರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು