Bengaluru 25°C
Ad

ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಆರ್‌ಸಿಬಿ ಆಟಗಾರ

ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್​ನಲ್ಲಿ ಆರ್‌ಸಿಬಿ ಗೆ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಇತ್ತ ಆರ್​ಸಿಬಿ ತಂಡ ಐಪಿಎಲ್​ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಕೂಡ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.

ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

Ad
Ad
Nk Channel Final 21 09 2023
Ad