ಬೆಂಗಳೂರು: ಇಂಡಿಯಾ ಕೇರ್ಸ್ ಫೌಂಡೇಶನ್ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ ಪಕ್ಕದಲ್ಲಿ ನಾಗರಿಕ ಸೌಲಭ್ಯಗಳನ್ನು ಸೇರಿಸಿದೆ.
ರಾಜಾನುಕುಂಟೆ ಸಮೀಪದ ಇಟ್ಟಗಲ್ಲಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ ಆರ್ಸಿಬಿ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಿದೆ. ಅಕ್ಟೋಬರ್ 2023 ರಲ್ಲಿ ಆರ್ಸಿಬಿ ಈ ಯೋಜನೆ ಪ್ರಾರಂಭಿಸಿತ್ತು. ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬೋರ್ವೆಲ್ಗಳನ್ನು 1000 ರಿಂದ 1500 ಅಡಿಗಳವರೆಗೆ ಕೊರೆಸಬೇಕಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ. ಹೀಗಾಗಿ ಈ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಅಷ್ಟೇನೂ ಹೇಳಿಕೊಳ್ಳುವಂತಿಲ್ಲ. ತಂಡ ಇದುವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಸೋತಿದ್ದು, ಏಕೈಕ ಗೆಲುವಿನೊಂದಿಗೆ 2 ಅಂಕಗಳೊಂದಿಗೆ ಪ್ರಸ್ತುತ 10 ತಂಡಗಳ ಪೈಕಿ ಕೊನೆಯ ಸ್ಥಾನದಲ್ಲಿದೆ. ಅದಾಗ್ಯೂ ಆರ್ಸಿಬಿ ಕ್ರಿಕೆಟ್ ಮೈದಾನದಿಂದ ಹೊರಗೆ ಮಾಡುತ್ತಿರುವ ತನ್ನ ಉದ್ಧಾತ ಕಾರ್ಯಗಳಿಂದಾಗಿ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದೆ. ಇದೀಗ ಅಂತಹದ್ದೇ ಕೆಲಸದಿಂದಾಗಿ ಆರ್ಸಿಬಿ ಮತ್ತೊಮ್ಮೆ ಎಲ್ಲರ ಮನ್ನಣೆಗೆ ಪಾತ್ರವಾಗಿದೆ.
ಇನ್ನು ಇದೇ ಭಾನುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿ ತನ್ನ 8ನೇ ಪಂದ್ಯವನ್ನಾಡಲಿದೆ. ಈ ಪಂದ್ಯ ಆರ್ಸಿಬಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಆರ್ಸಿಬಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ಆರ್ಸಿಬಿ ಪ್ರತಿ ಸೀಸನ್ನ ಒಂದು ಪಂದ್ಯದಲ್ಲಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತದೆ. ಅದರಂತೆ ಈ ಬಾರಿಯೂ ಆರ್ಸಿಬಿ ತಮ್ಮ ಪದ್ಧತಿಯನ್ನು ಮುಂದುವರೆಸುತ್ತಿದೆ.
ಆರ್ಸಿಬಿ ತನ್ನ ಅಭಿಮಾನಿಗಳಲ್ಲಿ ಸ್ವಚ್ಛತೆ ಮತ್ತು ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಹಸಿರು ಜೆರ್ಸಿಯನ್ನು ಧರಿಸಿ ಒಂದು ಪಂದ್ಯವನ್ನು ಆಡುತ್ತದೆ. ಅದರಂತೆ ಕಳೆದ ಬಾರಿ ಆರ್ಸಿಬಿ ತನ್ನ ಈ ಅಭಿಯಾನದಡಿಯಲ್ಲಿ ಬೆಂಗಳೂರಿನ ಮೂರು ಕೆರೆಗಳನ್ನು ಪುನರುಜ್ಜೀವನಗೊಳಿಸುವುದಕ್ಕೆ ಮುಂದಾಗಿತ್ತು. ಇದೀಗ ಆರ್ಸಿಬಿ ತಾನು ಕೈಗೆತ್ತಿಕೊಂಡಿದ್ದ ಕೆಲಸವನ್ನು ವರ್ಷದೊಳಗೆ ಪೂರೈಸಿದ್ದು, ತನ್ನ ಸತ್ಕಾರ್ಯದ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.