Bengaluru 23°C
Ad

ಇಂದು ನಿರ್ಣಾಯಕ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ಮುಖಾಮುಖಿ‌

ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.

ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಹೀಗಾಗಿ ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಆರ್​ಸಿಬಿ ಮತ್ತು ಆರ್​ಆರ್ ಈವರೆಗೆ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

ಹಾಗೆಯೇ ಪ್ಲೇಆಫ್ ಹಂತದಲ್ಲಿ ಆರ್​ಸಿಬಿ ಮತ್ತು ಆರ್​ಆರ್ ತಂಡಗಳು ಒಂದು ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. 2015 ರಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 71 ರನ್​ಗಳಿಂದ ಸೋಲಿಸಿ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿತ್ತು.

Ad
Ad
Nk Channel Final 21 09 2023
Ad