ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು.
3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿದ RCB ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂದ್ಯ ಗೆಲ್ಲಲು 251 ರನ್ ಗಳ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ CSK ತಂಡವು 19.4 ಓವರುಗಳಲ್ಲಿ 207 ರನ್ ಗಳಿಸಿ ಆಲೌಟ್ ಆಯಿತು.

