News Karnataka Kannada
Sunday, April 28 2024
ಕ್ರೀಡೆ

ರೂರ್ಕಿ: ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತ

Rishabh Pant's car meets with an accident on Delhi-Dehradun highway in Roorkee
Photo Credit : Facebook

ರೂರ್ಕಿ: ಉತ್ತರಖಂಡದ ರೂರ್ಕಿ ಬಳಿ ಗುರುವಾರ ನಡೆದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಿಕೆಟಿಗ ದೆಹಲಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಹಮ್ಮದ್ಪುರ್ ಝಾಲ್ ಬಳಿ ಈ ಅಪಘಾತ ಸಂಭವಿಸಿದೆ. ವೈದ್ಯರ ಪ್ರಕಾರ, ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.

ಮಾಹಿತಿ ಪಡೆದ ನಂತರ, ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನ ಕಿಶೋರ್ ಸಿಂಗ್ ಸ್ಥಳಕ್ಕೆ ತಲುಪಿದ್ದಾರೆ. ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್, ಪ್ರಸ್ತುತ ರಿಷಭ್ ಅವರ ಸ್ಥಿತಿ ಸ್ಥಿರವಾಗಿದೆ, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಭ್ ಅವರ ಕಾರು ರೈಲಿಂಗ್ ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಬಹಳ ಕಷ್ಟಪಟ್ಟು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಅದೇ ಸಮಯದಲ್ಲಿ, ಅಪಘಾತದಲ್ಲಿ  ಗಾಯಗೊಂಡಿದ್ದ ರಿಷಭ್ ಅವರನ್ನು ದೆಹಲಿ ರಸ್ತೆಯ ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು