ಟೀಮ್ ಇಂಡಿಯಾ ಹಾಗೂ ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ನಾಯಕ ಮಾಡದ ದಾಖಲೆಯನ್ನು ರೋಹಿತ್ ಶರ್ಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 230 ರನ್ ಕಲೆ ಹಾಕಿತು. ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ ನಾಯಕ ಅಮೋಘ ಪ್ರದರ್ಶನ ನೀಡಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ನಂಬರ್-1 ನಾಯಕ ಎಂಬ ಹೆಗ್ಗಳಿಕೆಗೆ ಹಿಟ್‌ಮ್ಯಾನ್ ಪಾತ್ರರಾಗಿದ್ದಾರೆ. ಶ್ರೀಲಂಕಾ ವಿರುದ್ಧ 3 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ರೋಹಿತ್ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.
ಆರಂಭಿಕರಾಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ 47 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ಸೇರಿದಂತೆ 58 ರನ್ ಬಾರಿಸಿದರು. ರೋಹಿತ್ ಶರ್ಮಾ ಅವರ ಈ ಇನ್ನಿಂಗ್ಸ್ ಇತಿಹಾಸದ ಪುಟ ಸೇರಿದೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಈಗ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ.
ಇನ್ನು ರೋಹಿತ್ ಶರ್ಮಾ ನಾಯಕನಾಗಿ ಇದುವರೆಗೆ ಒಟ್ಟು 124 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ, ಒಟ್ಟು 234 ಸಿಕ್ಸರ್ ಸಿಡಿಸುವ ಮೂಲಕ, ಅತಿ ಹೆಚ್ಚು ಸಿಕ್ಸರ್ ಬಾರಿಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೊದಲು ಈ ದಾಖಲೆ ಇಂಗ್ಲೆಂಡ್ ತಂಡದ ಇಯಾನ್ ತಂಡದ ಇಯಾನ್ ಮಾರ್ಗನ್ ಹೆಸರಿನಲ್ಲಿತ್ತು. ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 233 ಸಿಕ್ಸರ್ ಬಾರಿಸಿದ ದಾಖಲೆಯನ್ನು ಹೊಂದಿದ್ದರು. ಇದರೊಂದಿಗೆ ಏಕದಿನ ವೃತ್ತಿಜೀವನದಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ರೋಹಿತ್ ಇದೀಗ ಮೂರನೇ ಸ್ಥಾನಕ್ಕೇರಿದ್ದಾರೆ.