Bengaluru 27°C
Ad

ಟೀಮ್ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟ ಖುಷಿಯಲ್ಲಿ ಆನಂದಭಾಷ್ಪ ಸುರಿಸಿದ ರೋಹಿತ್​ ಶರ್ಮ

ನಿನ್ನೆ ನಡೆದ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್​ ತಂಡವನ್ನು 68 ರನ್​ಗಳಿಂದ ಬಗ್ಗುಬಡಿದು ಫೈನಲ್​ ಪ್ರವೇಶಿಸಿದೆ.

ಪ್ರೊವಿಡೆನ್ಸ್‌: ನಿನ್ನೆ ನಡೆದ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್​ ತಂಡವನ್ನು 68 ರನ್​ಗಳಿಂದ ಬಗ್ಗುಬಡಿದು ಫೈನಲ್​ ಪ್ರವೇಶಿಸಿದೆ.

ತಂಡ ಫೈನಲ್​ ಪ್ರವೇಶಿಸುತ್ತಿದ್ದಂತೆ ನಾಯಕ ರೋಹಿತ್​ ಶರ್ಮ ಅವರು ಈ ಸಂತಸದಲ್ಲಿ ಆನಂದಭಾಷ್ಪ ಸುರಿಸಿದರು. ಈ ವಿಡಿಯೊ ವೈರಲ್​ ಆಗಿದೆ.

ರೋಹಿತ್​ ಶರ್ಮ ನಾಯಕತ್ವದಲ್ಲಿ ಇದೇ ಮೊದಲ ಬಾರಿಗೆ ತಂಡ ಫೈನಲ್​ ಪ್ರವೇಶಿಸಿತು. ಜತೆಗೆ 10 ವರ್ಷಗಳ ಬಳಿಕ ಭಾರತ ತಂಡ ಈ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತಿಗೇರಿತು. ಈ ಎಲ್ಲ ಖುಷಿಯಿಂದ ರೋಹಿತ್​ ಕಣ್ಣೀರು ಸುರಿಸಿದರು.

ರೋಹಿತ್​ ಕಣ್ಣೀರು ಹಾಕುತ್ತಿದ್ದ ವೇಳೆ ಸಹ ಆಟಗಾರ ವಿರಾಟ್​ ಬೆನ್ನು ತಟ್ಟಿ ಬೆಂಬಲ ಸೂಚಿಸಿದ್ದು ಕೂಡ ಈ ವಿಡಿಯೊದಲ್ಲಿ ನೋಡಬಹುದಾಗಿದೆ. ರೋಹಿತ್​ ಅವರಿಗೆ ಈ ಬಾರಿಯ ಟಿ20 ವಿಶ್ವಕಪ್​ ಬಹುತೇಕ ವಿದಾಯದ ಟೂರ್ನಿಯಾಗಿದೆ.

ಅಂತಿಮ ಹಂತದ ಅವಕಾಶದಲ್ಲಿ ಕಪ್​ ಗೆಲ್ಲಲಿದ್ದಾರಾ ಎಂದು ಕಾದು ನೋಡಬೇಕಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

https://x.com/tyrion_jon/status/1806419197444207066?

Ad
Ad
Nk Channel Final 21 09 2023
Ad