Categories: ಕ್ರೀಡೆ

ಮುಂಬೈ ಇಂಡಿಯನ್ಸ್​ ಕೋಚ್​ಗೆ ಟಾಂಗ್ ನೀಡಿದ ರೋಹಿತ್​ ಪತ್ನಿ

ಮುಂಬಯಿ: ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕೆಳಗಿಳಿಸಿದ ವಿಚಾರದಲ್ಲಿ ಸಮರ್ಥನೆ ನೀಡಿದ ತಂಡದ ಕೋಚ್ ಮಾರ್ಕ್ ಬೌಚರ್​ಗೆ ರೋಹಿತ್ ಪತ್ನಿ ರಿತಿಕಾ ಟಾಂಗ್ ನೀಡಿದ್ದಾರೆ. ಇದರಲ್ಲಿ ಹಲವು ತಪ್ಪುಗಳಿವೆ ಎಂದು ಹೇಳುವ ಮೂಲಕ ರಿತಿಕಾ ಮ್ಯಾನೇಜ್​ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.

ಭಾರತದಲ್ಲಿ ಕ್ರಿಕೆಟ್​ ಎನ್ನುವುದು ತುಂಬಾ ಭಾವನಾತ್ಮಕವಾಗಿರುತ್ತಾರೆ. ಈ ಭಾವನೆಗಳನ್ನು ದೂರವಿಡಿ. ರೋಹಿತ್​ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಕ್ರಿಕೆಟಿಂಗ್​​ ನಿರ್ಧಾರ. ಬೇರೇನೂ ಇಲ್ಲ. ಬಹಳಷ್ಟು ಮಂದಿಗೆ ಇದು ಅರ್ಥವಾಗಿಲ್ಲ” ಎಂದು ಬೌಚರ್ ಹೇಳಿದ್ದರು.

ಮಾರ್ಕ್ ಬೌಚರ್​ ಅವರ ಸಂದರ್ಶನಕ್ಕೆ ಇನ್​ಸ್ಟಾಗ್ರಾಂನಲ್ಲಿ ಕಾಮೆಂಟ್ ಮಾಡಿದ ರೋಹಿತ್​ ಶರ್ಮ ಪತ್ನಿ ರಿತಿಕಾ, ‘ಇದರಲ್ಲಿ ಹಲವು ತಪ್ಪುಗಳಿವೆ’ ಎಂದು ಹೇಳುವ ಮೂಲಕ ಪತಿಯನ್ನು ನಾಯಕತ್ವದಿಂದ ಕಿತ್ತು ಹಾಕಿದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ರೋಹಿತ್‌ ಶರ್ಮ ಅವರನ್ನು ನಾಯಕತ್ವ ಸ್ಥಾನದಿಂದ ಕೈಬಿಟ್ಟು ಪಾಂಡ್ಯ ಅವರಿಗೆ ಪಟ್ಟ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಮಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಟ್ವಿಟರ್‌ನಲ್ಲಿ (ಎಕ್ಸ್‌) ನಾಲ್ಕು ಲಕ್ಷಕ್ಕೂ ಹೆಚ್ಚು ಫಾಲೋವರ್ಗಳನ್ನು ಕಳೆದುಕೊಂಡಿತ್ತು.

 

Ashitha S

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

11 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

24 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

36 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

47 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

2 hours ago