ಮಹಿಳೆಯರ ಪ್ರೀಮಿಯರ್ ಲೀಗ್ ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ವಡೋದರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ಗಳಲ್ಲಿ 203 ರನ್ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಗುರಿ ಬೆನ್ನಟ್ಟಿದ ಆರ್ಸಿಬಿ 19.4 ಓವರ್ಗಳಲ್ಲೇ 4 ವಿಕೆಟ್ ನಷ್ಟಕ್ಕೆ 204 ರನ್ ಬಾರಿಸಿ ಬಾರಿಸುವ ಮೂಲಕ ಭರ್ಜರಿ ಜಯ ದಾಖಲಿಸಿದೆ.
ಆರ್ ಸಿಬಿ ಪರ ಆರಂಭಿಕ ಆಟಗಾರ್ತಿ ಗ್ರೇಸ್ ಹ್ಯಾರಿಸ್ 9 ರನ್ ಗೆ ಔಟ್ ಆದರೆ, ನಾಯಕಿ ಸ್ಮೃತಿ ಮಂಧಾನ ಹಾಗೂ ಜಾರ್ಜಿಯಾ ವಾಲ್ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು.
ನಾಯಕಿ ಸ್ಮೃತಿ 41 ಬಾಲ್ ಗೆ 89 ರನ್ ಗಳಿಸಿದರೆ, ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 79 ರನ್ ಗಳಿಸಿದರು, ರಿಚಾ ಘೋಷ್ 6 ರನ್ ಕಲೆ ಹಾಕಲಷ್ಟೇ ಶಕ್ತರಾದರು. ಬಳಿಕ ಕ್ರೀಸ್ ಗೆ ಬಂದ ಡಿ ಕ್ಲರ್ಕ್ ಅಜೇಯ 7 ರನ್ ಗಳಿಸಿದರೆ, ರಾಧಾ ಯಾದವ್ ಅಜೇಯ 8 ರನ್ ಗಳಿಸುವ ಮೂಲಕ ಎರಡನೇ ಬಾರಿಗೆ ಆರ್ ಸಿಬಿ ತಂಡ ಡಬ್ಲ್ಯೂ ಪಿಲ್ ಟ್ರೋಫಿ ಪಡೆದಿದ್ದಾರೆ.


