ಬಾರ್ಬಡೋಸ್​: ಇಂದು ನಡೆಯುತ್ತಿರುವ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಇದು ಟಿ20 ವಿಶ್ವ ಕಪ್ ಫೈನಲ್​ನಲ್ಲಿ ತಂಡವೊಂದು ಪೇರಿಸಿದ ಗರಿಷ್ಠ ಮೊತ್ತವಾಗಿದೆ. ಹೀಗಾಗಿ ಇದು ಉತ್ತಮ ಮೊತ್ತವಾಗಿದೆ.

ಕಿಂಗ್ ಕೊಹ್ಲಿಯ ಅಬ್ಬರದ ಅರ್ಧ ಶತಕ (76 ರನ್​) ರನ್ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​, 31 ಎಸೆತ, 4 ಸಿಕ್ಸರ್​, 1 ಫೋರ್​) ನೆರವು ಪಡೆದ ಭಾರತ ತಂಡ ವಿಶ್ವ ಕಪ್​ 2024ರ ಫೈನಲ್ (T20 World Cup) ಪಂದ್ಯದಲ್ಲಿ 176 ರನ್​ಗಳ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಿದೆ.