ಮುಂಬೈ: ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಈ ಮೆಗಾ ಟೂರ್ನಿ ಗೆಲ್ಲಲು ಐಪಿಎಲ್ ತಂಡಗಳು ಭರ್ಜರಿ ತಯಾರಿ ನಡೆಸಿಕೊಂಡಿವೆ. ಈ ಮಧ್ಯೆ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾಗೆ ಶಾಕ್ ಕೊಟ್ಟಿದೆ.
ಇತ್ತೀಚೆಗೆ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ಗೆ ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ಮಾಡಿತ್ತು. ಈ ಬೆನ್ನಲ್ಲೇ ರೋಹಿತ್ ಶರ್ಮಾಗೆ ಕೊಕ್ ನೀಡಲಾಗಿದ್ದು, ಮುಂಬೈ ತಂಡದ ಹೊಸ ಕ್ಯಾಪ್ಟನ್ ಆಗಿ ಹಾರ್ದಿಕ್ ಪಾಂಡ್ಯರನ್ನು ನೇಮಿಸಲಾಗಿದೆ.
ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕೆಳಗಿಳಿದ ಬೆನ್ನಲೇ ಮತ್ತೊಂದು ಆಘಾತದ ಸುದ್ದಿ ಹೊರಬಿದ್ದಿದೆ. ಸಚಿನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ಮೆಂಟರ್ ಸ್ಥಾನ ತೊರೆದಿದ್ದಾರೆ. ವೈಯಕ್ತಿಕ ಕಾರಣಕ್ಕಾಗಿ ಈ ನಿರ್ಧಾರ ಮಾಡಿರುವುದಾಗಿ ಸಚಿನ್ ಹೇಳಿದ್ದಾರೆ.
ಸಚಿನ್ 2008 ರಿಂದ ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿದ್ರು. ಬಳಿಕ ಮೆಂಟರ್ ಆಗಿದ್ದರು. ಇವರ ಮಾರ್ಗದರ್ಶನದಲ್ಲಿ ಮುಂಬೈ 2013, 2015, 2017, 2019 ಹಾಗೂ 2020 ರಲ್ಲಿ ಟ್ರೋಫಿ ಜಯಿಸಿತ್ತು.