News Karnataka Kannada
Friday, April 19 2024
Cricket
ಕ್ರೀಡೆ

ಭಾರತದ ಹಾಕಿ ತಂಡದ ಆಟಗಾರನ ವಿರುದ್ಧ ಎಫ್ಐಆರ್ ದಾಖಲು !

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Photo Credit : News Kannada

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ವರುಣ್ ಕುಮಾರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಪೋಕ್ಸೋ ಪ್ರಕರಣ ದಾಖಲಾಗಿದೆ. 2019ರಲ್ಲಿ ಯುವತಿ 17ನೇ ವಯಸ್ಸಿನಲ್ಲಿ ಇರುವಾಗಲೇ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ.

ಭಾರತ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಮೂಲತಃ ಹಿಮಾಚಲ ಪ್ರದೇಶದವರು. 2017ರಲ್ಲಿ‌ ಭಾರತ ತಂಡದ ಪರ ಪಾದಾರ್ಪಣೆ ಮಾಡಿದ್ದರು. 2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2022 ರ ಏಷ್ಯನ್ ಗೇಮ್ಸ್‌ ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದರು. 2020 ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯ. 2021ನೇ ಸಾಲಿನ ಅರ್ಜುನ ಪ್ರಶಸ್ತಿಗೂ ವರುಣ್ ಕುಮಾರ್ ಭಾಜನರಾಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು