ಪುತ್ತೂರು: ಕೊಲ್ಕತ್ತಾದಲ್ಲಿ ನಡೆದ ಸ್ಕೂಲ್‌ಗೇಮ್ಸ್‌ ಫೆಡರೇಶನ್‌ ಆಫ್‌ಇಂಡಿಯಾ(SGFI) ದ 68ನೇ ರಾಷ್ಟ್ರ ಮಟ್ಟದ ಚೆಸ್‌ಪಂದ್ಯಾಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್‌ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಇವರು ಪುತ್ತೂರಿನ ದಿನೇಶ್‌ಪ್ರಸನ್ನ ಹಾಗೂ ಉಮಾ ಡಿ ಪ್ರಸನ್ನ ಇವರ ಪುತ್ರ . ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿದ್ದು, ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.