ಫ್ರಾನ್ಸ್​ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಟಿ63 ಸ್ಪರ್ಧೆಯಲ್ಲಿ ಭಾರತದ ಶದರ್ ಕುಮಾರ್ ಹಾಗೂ ಮರಿಯಪ್ಪನ್ ತಂಗವೇಲು ಪದಕಗಳನ್ನು ಗೆದ್ದಿದ್ದಾರೆ. 1.88 ಮೀಟರ್ ಎತ್ತರ ಜಿಗಿತದೊಂದಿಗೆ ಶರದ್ ಕುಮಾರ್ ಬೆಳ್ಳಿ ಪದಕ ಗೆದ್ದರೆ, 1.85 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಮರಿಯಪ್ಪನ್ ತಂಗವೇಲು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಈ ಎರಡು ಪದಕಗಳೊಂದಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕಗಳ ಸಂಖ್ಯೆ 20 ಕ್ಕೇರಿದೆ. ಇದು ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತೀಯರ ಶ್ರೇಷ್ಠ ಸಾಧನೆ ಎಂಬುದು ವಿಶೇಷ.

ಟಿ63 ವಿಭಾಗದಲ್ಲಿ ವಿಶ್ವ ದಾಖಲೆ ಹೊಂದಿರುವ ಅಮೆರಿಕದ ಎಜ್ರಾ ಫ್ರೆಚ್ ಅವರು 1.94 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಪ್ಯಾರಾಲಿಂಪಿಕ್ಸ್​​ನಲ್ಲಿ ಹೊಸ ದಾಖಲೆಯನ್ನು ಬರೆದು, ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದರು.